ಕರ್ನಾಟಕ

karnataka

ETV Bharat / state

ಆಳಂದ ಪಟ್ಟಣದಲ್ಲಿ ಪೊಲೀಸ್ ರಾಜ್ ಆಡಳಿತ.. ಮಾಜಿ ಶಾಸಕ ಬಿ ಆರ್ ಪಾಟೀಲ್ - Former MLA BR Patil statement on Alanda police station

ಆಳಂದದಲ್ಲಿ ಪೊಲೀಸರು ಆಡಿದ್ದೇ ಆಟ. ಪ್ರತಿ ಲಾರಿಗೆ 50 ಲಕ್ಷ ರೂಪಾಯಿ ಹಣ ಪಡೆದು ಅಕ್ರಮ ಅಕ್ಕಿ ಸಾಗಾಟಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ. ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆದಿದ್ದರೂ ಪೊಲೀಸರು ಕಡಿವಾಣ ಹಾಕುತ್ತಿಲ್ಲ..

ಮಾಜಿ ಶಾಸಕ ಬಿ.ಆರ್.ಪಾಟೀಲ್
ಮಾಜಿ ಶಾಸಕ ಬಿ.ಆರ್.ಪಾಟೀಲ್

By

Published : Oct 27, 2020, 4:35 PM IST

Updated : Oct 27, 2020, 5:18 PM IST

ಕಲಬುರಗಿ:ಆಳಂದ ಪಟ್ಟಣದಲ್ಲಿ ಪೊಲೀಸ್ ರಾಜ್ ಆಡಳಿತ ನಡೆದಿದೆ ಎಂದು ಮಾಜಿ ಶಾಸಕ ಬಿ.ಆರ್.ಪಾಟೀಲ್ ಆರೋಪಿಸಿದ್ದಾರೆ.

ಮಾಜಿ ಶಾಸಕ ಬಿ.ಆರ್.ಪಾಟೀಲ್

ಕಲಬುರಗಿಯಲ್ಲಿ ಮಾತನಾಡಿದ ಅವರು, ಅಮಾಯಕರ ಮೇಲೆ ಸುಖಾಸುಮ್ಮನೆ ಪ್ರಕರಣ ದಾಖಲು ಮಾಡುತ್ತಿದ್ದಾರೆ. ಬಲಾಢ್ಯರಿಗೆ ಪೊಲೀಸ್ ಇಲಾಖೆ ರಕ್ಷಣೆ ನೀಡುತ್ತಿದೆ. ಆಳಂದದಲ್ಲಿ ಪೊಲೀಸರು ಆಡಿದ್ದೇ ಆಟ. ಪ್ರತಿ ಲಾರಿಗೆ 50 ಲಕ್ಷ ರೂಪಾಯಿ ಹಣ ಪಡೆದು ಅಕ್ರಮ ಅಕ್ಕಿ ಸಾಗಾಟಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ. ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆದಿದ್ದರೂ ಪೊಲೀಸರು ಕಡಿವಾಣ ಹಾಕುತ್ತಿಲ್ಲ. ಸ್ವತಃ ನನ್ನ ಮೇಲೆಯೂ ಆಳಂದ ಠಾಣೆಯಲ್ಲಿ ಸುಳ್ಳು ಪ್ರಕರಣ ದಾಖಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಗೃಹ ಸಚಿವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಆಳಂದ ಪಟ್ಟಣದಲ್ಲಿ ನಡೆದಿರುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಇಲ್ಲದಿದ್ದಲ್ಲಿ ಬೆಂಬಲಿಗರೊಂದಿಗೆ ಉಗ್ರ ಹೋರಾಟ ಮಾಡುವುದಾಗಿ ಬಿ.ಆರ್.ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

Last Updated : Oct 27, 2020, 5:18 PM IST

For All Latest Updates

TAGGED:

ABOUT THE AUTHOR

...view details