ಕಲಬುರಗಿ:ಸಾಲಬಾಧೆ ತಾಳಲಾರದೆ ರೈತನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಫಜಲಪುರ ತಾಲೂಕಿನ ಕೊಳ್ಳೂರ ಗ್ರಾಮದಲ್ಲಿ ನಡೆದಿದೆ.
ಮಾದೇವಪ್ಪ ಪೂಜಾರಿ (65) ಆತ್ಮಹತ್ಯೆ ಮಾಡಿಕೊಂಡ ರೈತ. ಕೃಷಿ ಚಟುವಟಿಕೆಗಾಗಿ ಕೆಜಿಬಿ ಬ್ಯಾಂಕಿನಲ್ಲಿ 3 ಲಕ್ಷ ರೂ. ಹಾಗೂ ಖಾಸಗಿಯಾಗಿ ಸಾಲ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಮಾಡಿದ ಸಾಲ ಮರು ಪಾವತಿ ಮಾಡಲಾಗದೆ ಮನ ನೊಂದಿದ್ದು, ಜಮೀನಿಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ರೈತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಪತ್ನಿ ದೂರು ದಾಖಲಿಸಿದ್ದಾರೆ.