ಕಲಬುರಗಿ:ಮತ್ತೆ ಭೀಮಾತೀರದಲ್ಲಿ ರಕ್ತಪಾತ ನಡೆದಿದ್ದು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ ಅವರ ಕಿರಿಯ ಸಹೋದರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಹನುಮಂತ ಕೂಡಲಗಿ (40) ಮೃತ ವ್ಯಕ್ತಿ. ಜೇವರ್ಗಿ ತಾಲೂಕಿನ ಬಳ್ಳುಂಡಗಿ ಗ್ರಾಮದ ಬಳಿ ಹನುಮಂತನ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ.