ಕಲಬುರಗಿ:ಜಿಲ್ಲೆಯಲ್ಲಿ ಮತ್ತೆ ನಾಲ್ವರು ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ವಿದ್ಯಾರ್ಥಿಗಳ ಪೋಷಕರನ್ನು ಆತಂಕಕ್ಕೀಡುಮಾಡಿದೆ.
ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ನಾಲ್ವರು ಶಿಕ್ಷಕರಿಗೆ ಕೊರೊನಾ - teachers tested corona positive in kalaburagi
ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ನಾಲ್ವರು ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರಿಂದ ವಿದ್ಯಾರ್ಥಿಗಳ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ.
ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ನಾಲ್ವರು ಶಿಕ್ಷಕರಿಗೆ ಕೊರೊನಾ
ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ವರು ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರಿಂದಾಗಿ ವಿದ್ಯಾಗಮ ಯೋಜನೆಯಡಿ ವಠಾರ ಶಾಲೆಯಲ್ಲಿ ಪಾಠ ಕೇಳಿದ್ದ ಮಕ್ಕಳಿಗೆ ಭಯ ಶುರುವಾಗಿದೆ.
ಮೊನ್ನೆಯಷ್ಟೇ ಮಾಶಾಳ ವಠಾರ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಈಗ ಮತ್ತೆ ನಾಲ್ವರು ಶಿಕ್ಷಕರಿಗೆ ಕೊರೊನಾ ತಗುಲಿರುವುದರಿಂದ ಮಕ್ಕಳ ಪೋಷಕರಲ್ಲಿ ಆತಂಕ ಮನೆಮಾಡಿದೆ. ಕೊರೊನಾ ಹಾವಳಿಯಿಂದಾಗಿ ಸದ್ಯಕ್ಕೆ ರಾಜ್ಯ ಸರ್ಕಾರ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.