ಕಲಬುರಗಿ: ಕೊರೋನಾ ಸೋಂಕಿನಿಂದ ಕರಾಳ ದಿನ ಎದುರಿಸುತ್ತಿದ್ದ ಜಿಲ್ಲೆಯ ಜನರು ನಿಟ್ಟುಸಿರು ಬಿಡುವಂತಾಗಿದೆ. ಇಂದು ಮತ್ತೆ ನಾಲ್ಕು ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ವಾಪಸಾಗಿದ್ದಾರೆ.
ಕಲಬುರಗಿಯಲ್ಲಿ ನಾಲ್ವರು ಕೊರೊನಾ ಸೋಂಕಿತರು ಗುಣಮುಖ: ನಿಟ್ಟುಸಿರು ಬಿಟ್ಟ ಜನತೆ
ಕೊರೊನಾ ಸೋಂಕಿನಿಂದ ಆತಂಕಗೊಂಡಿದ್ದ ಜನರು ಈಗ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇಂದು ನಾಲ್ವರು ಗುಣಮುಖರಾಗಿ ಮನೆಗೆ ವಾಪಸಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಬಿ.ಶರತ್ ತಿಳಿಸಿದ್ದಾರೆ.
ಈ ಮೂಲಕ ಒಟ್ಟು 18 ಕೊರೊನಾ ಸೋಂಕಿತ ರೋಗಿಗಳು ಗುಣಮುಖರಾಗಿದ್ದಾರೆ. ಈಗ ಹೊಸದಾಗಿ 5 ವರ್ಷದ ಮಗು ಸೇರಿದಂತೆ ನಾಲ್ವರು ಗುಣಮುಖರಾಗಿದ್ದಾರೆ. ನಗರದ ದರ್ಗಾ ಪ್ರದೇಶದ 10 ವರ್ಷದ ಬಾಲಕಿ (ರೋಗಿ ಸಂಖ್ಯೆ-254), ಖಾದ್ರಿ ಚೌಕ್ ಪ್ರದೇಶದ 32 ವರ್ಷದ ಯುವಕ(ರೋಗಿ ಸಂಖ್ಯೆ-314) ಹಾಗೂ ಮೋಮಿನಪುರ ಪ್ರದೇಶದ 5 ವರ್ಷದ ಮಗು(ರೋಗಿ ಸಂಖ್ಯೆ-315) ಮತ್ತು 13 ವರ್ಷದ ಬಾಲಕಿ(ರೋಗಿ ಸಂಖ್ಯೆ-392) ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಬಿ.ಶರತ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೂ ಕೊರೊನಾ ಪಾಸಿಟಿವ್ ಪತ್ತೆಯಾದ 55 ಜನರಲ್ಲಿ ಒಟ್ಟು 18 ರೋಗಿಗಳು ಕೊರೊನಾ ಸೋಂಕಿನಿಂದ ಗುಣಮುಖರಾದ್ದಾರೆ. ಉಳಿದಂತೆ ಐವರು ಮೃತಪಟ್ಟಿದ್ದಾರೆ. ಉಳಿದ 32 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.