ಕಲಬುರಗಿ: ಕಳೆದೆರಡು ದಿನಗಳಿಂದ ಮೈದುಂಬಿ ಹರಿಯುತ್ತಿದ್ದ ಭೀಮಾ ನದಿ ಕೊಂಚ ಶಾಂತವಾಗಿದೆ. ನೀರಿನ ಮಟ್ಟ ತಗ್ಗಿದ ಪರಿಣಾಮ ಅಫಜಲಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪುರ ಸೇತುವೆ ಮೇಲೆ ವಾಹನಗಳ ಸಂಚಾರ ಮತ್ತೆ ಆರಂಭವಾಗಿದೆ.
ಮಹಾರಾಷ್ಟ್ರದ ಉಜನಿ, ವೀರ್ ಜಲಾಶಯ ಪ್ರದೇಶ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆ ಸುರಿದ ಹಿನ್ನೆಲೆ, ಭೀಮಾ ನದಿಗೆ 60 ಸಾವಿರ ಕ್ಯೂಸೆಕ್ಗೂ ಅಧಿಕ ನೀರು ಬಿಡಲಾಗಿತ್ತು. ಪರಿಣಾಮ ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜ್‌ನಲ್ಲಿ ನೀರಿನಮಟ್ಟ ಹೆಚ್ಚಾದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಬ್ಯಾರೇಜ್ ದಿಂದ 1.20 ಲಕ್ಷ ಕ್ಯೂಸೆಕ್ ನೀರು ನದಿಗೆ ಹರಿಯಬಿಡಲಾಗಿತ್ತು. ಇದು ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಭೀತಿಯನ್ನು ಸೃಷ್ಟಿಸಿತ್ತು.