ಕಲಬುರಗಿ:ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಮಹಾತ್ಮ ಗಾಂಧೀಜಿ ಅವರ 150ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಲಬುರಗಿಯಲ್ಲಿ ಗಾಂಧಿ ಜಯಂತಿ ಅರ್ಥಪೂರ್ಣ ಆಚರಣೆ - ಗಾಂಧಿ ಜಯಂತಿ
ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಮಹಾತ್ಮ ಗಾಂಧೀಜಿ ಅವರ 150ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ದೇಶಾದ್ಯಂತ ಇಂದು ಸಡಗರ ಸಂಭ್ರಮದಿಂದ ರಾಷ್ಟ್ರಪಿತ ಗಾಂಧೀಜಿ ಅವರ ಜನ್ಮದಿನವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಇತ್ತ ಜಿಲ್ಲಾ ಕೇಂದ್ರದಲ್ಲಿ ನಡೆದ ಕಾರ್ಯಕ್ರಮಕ್ಕೆ ಸಂಸದ ಡಾ.ಉಮೇಶ್ ಜಾಧವ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ರು. ಬಳಿಕ ಗಾಂಧೀಜಿಯವರ ತತ್ವ ಸಂದೇಶ ಸಾರುವ ಸಾಕ್ಷ್ಯಚಿತ್ರ ಪ್ರದರ್ಶನ, ಸರ್ವಧರ್ಮ ಪ್ರಾರ್ಥನೆ ಮತ್ತು ಸದ್ಭಾವನಾ ಗೀತ ಗಾಯನ ನಡೆಸಲಾಯಿತು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಸಂಸದ ಉಮೇಶ್ ಜಾಧವ್, ಶಾಸಕಿ ಖನೀಸ್ ಫಾತಿಮಾ, ಪ್ರದೇಶ ಆಯುಕ್ತರಾದ ಸುಭೋದ್ ಯಾಧವ್ ಹಾಗೂ ಜಿಲ್ಲಾಧಿಕಾರಿ ಬಿ ಶರತ್ ಸ್ವತಃ ಪೊರಕೆ ಹಿಡಿದು ಕಸ ಗುಡಿಸುವ ಮೂಲಕ ಸ್ವಚ್ಛತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದ್ರು.