ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆ ಬಾಗಿಲು ಕಿಟಕಿಗಳು ಚಿದ್ರಗೊಂಡಿದ್ದು, ಕೂದಲೆಳೆ ಅಂತರದಲ್ಲಿ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಿಲಿಂಡರ್ ಸ್ಪೋಟ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಕುಟುಂಬಸ್ಥರು - ನ್ಯೂ ರಾಘವೇಂದ್ರ ನಗರ ಪೊಲೀಸ್ ಠಾಣೆ
ಅಡುಗೆ ಮಾಡುವಾಗ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆ ಬಾಗಿಲು ಕಿಟಕಿಗಳು ಚಿದ್ರಗೊಂಡಿದ್ದು, ಕೂದಲೆಳೆ ಅಂತರದಲ್ಲಿ ಐವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಗ್ಯಾಸ್ ಸಿಲಿಂಡರ್ ಸ್ಪೋಟ
ನಗರದ ಮಾಣಿಕೇಶ್ವರಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ಅಡುಗೆ ಮಾಡುವಾಗ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ದಿಢೀರ್ ಸ್ಫೋಟವಾಗಿದೆ. ಘಟನೆಯಲ್ಲಿ ಸುರೇಶ (57) ಎಂಬುವರ ಕಾಲು ಮೂಳೆ ಮುರಿದಿದೆ.
ಭರತ್, ರಮೇಶ್, ಅಂಬಿಕಾ, ಶಶಿಕಲಾ ಇವರಿಗೆ ಸುಟ್ಟ ಗಾಯಾಗಳಾಗಿದ್ದು, ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನ್ಯೂ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.