ಕಲಬುರಗಿ:ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟಿ ಚಲಾಯಿಸುತ್ತಿದ್ದ ಯುವತಿ ಸ್ಥಳದಲ್ಲಿಯೇ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ನಂದೂರ ಬಳಿಯ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ನಡೆದಿದೆ.
ಭಂಕೂರ ಗ್ರಾಮದ ನಿವಾಸಿ ಪ್ರಿಯಾ(24) ಮೃತ ಯುವತಿ ಎಂದು ಗುರುತಿಸಲಾಗಿದೆ. ಎಂದಿನಂತೆ ಕೆಲಸಕ್ಕೆ ಹೋಗಿ ವಾಪಸಾಗುವಾಗ ಅಪರಿಚಿತ ವಾಹನ ಸ್ಕೂಟಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಪಘಾತದ ಬಳಿಕ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ.