ಕಲಬುರಗಿ: ಬಿಜೆಪಿ ಸರ್ಕಾರ ರಚನೆಗೆ ಸಹಕರಿಸಿದವರಿಗೆ ಸ್ಥಾನಮಾನ ನೀಡುವಂತೆ ಸಿಎಂ ಯಡಿಯೂರಪ್ಪ ಹಾಗೂ ನಾಯಕರಿಗೆ ಮನವಿ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
ಸೋತವರಿಗೆ ಎಂಎಲ್ಸಿ ಟಿಕೆಟ್ ನೀಡದಿದ್ದರೆ ಕಾದು ನೋಡುತ್ತೇವೆ: ಭೈರತಿ ಬಸವರಾಜ್ - latest kalaburgi news
ಬಿಜೆಪಿಯಲ್ಲಿ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಬಿಸಿಬಿಸಿ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಸೋತವರಿಗೆ ಎಂಎಲ್ಸಿ ಟಿಕೆಟ್ ನೀಡದಿದ್ದರೆ ಕಾದು ನೋಡುವುದಾಗಿ ಹೇಳಿದ್ದಾರೆ.
![ಸೋತವರಿಗೆ ಎಂಎಲ್ಸಿ ಟಿಕೆಟ್ ನೀಡದಿದ್ದರೆ ಕಾದು ನೋಡುತ್ತೇವೆ: ಭೈರತಿ ಬಸವರಾಜ್ Give the MLC ticket to the losers: Byrati Basavaraj](https://etvbharatimages.akamaized.net/etvbharat/prod-images/768-512-7625070-544-7625070-1592218033793.jpg)
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್
ಸಚಿವ ಭೈರತಿ ಬಸವರಾಜ್
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸರ್ಕಾರ ರಚನೆ ಮಾಡಲು ಸಾಕಷ್ಟು ಶ್ರಮ ವಹಿಸಿದ್ದಾರೆ. ಹಾಗಾಗಿ ವಿಧಾನಸಭಾ ಉಪ ಚುನಾವಣೆಯಲ್ಲಿ ಸೋತವರಿಗೆ ಎಂಎಲ್ಸಿ ಟಿಕೆಟ್ ಕೊಡುವಂತೆ ಮುಖ್ಯಮಂತ್ರಿಗಳಿಗೆ ಈಗಾಗಲೇ ಮನವಿ ಮಾಡಿದ್ದೇವೆ. ಸೋತವರಿಗೆ ವಿಧಾನ ಪರಿಷತ್ ಸ್ಥಾನ ನೀಡುತ್ತಾರೆಂಬ ಬರವಸೆ ಇದೆ. ಹಾಗೊಂದು ವೇಳೆ ಸ್ಥಾನಮಾನ ನೀಡದಿದ್ದರೆ ಮುಂದಿನ ನಿಲುವು ಏನಿರುತ್ತೆ ಎಂಬ ಪತ್ರಕರ್ತರ ಪ್ರಶ್ನೆಗೆ, ಎಲ್ಲದಕ್ಕೂ ಕಾದು ನೋಡುತ್ತೇವೆ ಎಂದಿದ್ದಾರೆ.