ಕರ್ನಾಟಕ

karnataka

ETV Bharat / state

ಹೊಟ್ಟೆಪಾಡಿಗೆ ಕೆಲಸಕ್ಕೆ ಹೊರಟವರ ಮೇಲೆ ವಿಧಿಯ ಅಟ್ಟಹಾಸ..

ಕೆಲಸಕ್ಕಾಗಿ ಸೇಡಂ ತಾಲೂಕಿನ ಜಮೀನೊಂದಕ್ಕೆ ವಾಹನದಲ್ಲಿ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ವಾಹನದಲ್ಲಿದ್ದ ಮೂವರು ಮಕ್ಕಳು ಸೇರಿ 20 ಜನರಿಗೆ ಗಂಭೀರ ಗಾಯಗಳಾಗಿವೆ.

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿ

By

Published : Jul 12, 2019, 5:52 PM IST

ಕಲಬುರಗಿ : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ ಮೂವರು ಮಕ್ಕಳು ಸೇರಿ 20 ಜನ ಕೂಲಿಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸುಲೇಪೇಟ್ ಬಳಿ ನಡೆದಿದೆ.

ಕೆಲಸಕ್ಕಾಗಿ ಸೇಡಂ ತಾಲೂಕಿನ ಜಮೀನೊಂದಕ್ಕೆ ವಾಹನದಲ್ಲಿ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ವಾಹನದಲ್ಲಿದ್ದ ಮೂವರು ಮಕ್ಕಳು ಸೇರಿ 20 ಜನರಿಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿ

ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನೂ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಬಡ ಕೂಲಿ ಕಾರ್ಮಿಕರಾಗಿದ್ದು, ಅವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕೆಂದು ಜಿಲ್ಲಾ ಪಂಚಾಯತ್ ಸದಸ್ಯ ಶರಣಪ್ಪ ತಳವಾರ ಆಗ್ರಹಿಸಿದ್ದಾರೆ.

ABOUT THE AUTHOR

...view details