ಕಲಬುರಗಿ :ಕೊರೊನಾದಂತಹ ಸಂದಿಗ್ಧ ಸ್ಥಿತಿಯಲ್ಲಿ ಸರ್ಕಾರಿ ಕೆಲಸಕ್ಕೆ ಗೈರಾಗಿ ಖಾಸಗಿ ಆಸ್ಪತ್ರೆಯಲ್ಲಿ ಸೇವೆಗೈಯುತ್ತಿದ್ದ ವೈದ್ಯ ಸಂಗಮೇಶ್ ಟಕ್ಕಳಕಿ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ಅಫಜಲಪುರ ತಾಲೂಕಾಸ್ಪತ್ರೆಯಲ್ಲಿ ಎಲುಬು ಮತ್ತು ಕೀಲು ತಜ್ಞರಾದ ಡಾ.ಸಂಗಮೇಶ್ ಟಕ್ಕಳಕಿ, ಮೇ 25ರಿಂದ ಸರ್ಕಾರಿ ಕೆಲಸಕ್ಕೆ ಅನಧಿಕೃತವಾಗಿ ಗೈರು ಆಗಿದ್ದರು. ಈ ಸಂಬಂಧ ಮೇಲಾಧಿಕಾರಿಗಳು ದೂರವಾಣಿ ಕರೆ ಮಾಡಿದ್ದರೂ ಸ್ವೀಕರಿಸಿರಲಿಲ್ಲ.
ಡಾ.ಸಂಗಮೇಶ್ ಟಕ್ಕಳಕಿ ರೋಗಿಯೊಬ್ಬರನ್ನು ತಪಾಸಣೆ ಮಾಡುತ್ತಿದ್ದಾಗಲೇ ಸಿಕ್ಕಿ ಬಿದ್ದಿದ್ದಾರೆ ಡಾ. ಸಂಗಮೇಶ್ ಅಫಜಲಪುರ ಪಟ್ಟಣದಲ್ಲೇ ತನ್ನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ತಿಳಿದ ಅಫಜಲಪುರ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ ಮತ್ತು ತಾಲೂಕಾಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ಸುಶೀಲಕುಮಾರ್, ಕ್ಲಿನಿಕ್ ಮೇಲೆ ದಿಢೀರ್ ದಾಳಿ ನಡೆಸಿದಾಗ ಡಾ.ಸಂಗಮೇಶ್ ಟಕ್ಕಳಕಿ ರೋಗಿಯೊಬ್ಬರನ್ನು ತಪಾಸಣೆ ಮಾಡುತ್ತಿದ್ದಾಗಲೇ ಸಿಕ್ಕಿ ಬಿದ್ದಿದ್ದಾರೆ.
ಸರ್ಕಾರಿ ಕೆಲಸಕ್ಕೆ ಅನಧಿಕೃತವಾಗಿ ಗೈರಾಗಿರುವ ಮತ್ತು ಖಾಸಗಿ ಕ್ಲಿನಿಕ್‍ನಲ್ಲಿ ಕರ್ತವ್ಯ ನಿರ್ವಸುತ್ತಿದ್ದ ಸಂಬಂಧ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.