ಕರ್ನಾಟಕ

karnataka

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ವಿಶೇಷ ಒತ್ತು ನೀಡಿದೆ: ಡಿಸಿಎಂ ಕಾರಜೋಳ

By

Published : Sep 17, 2020, 2:24 PM IST

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ವಿಶೇಷ ಒತ್ತು ನೀಡಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

DCM Govinda Karajola
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ

ಕಲಬುರಗಿ: ಅತಿ ಹೆಚ್ಚು ಬಡವರು, ಗುಳೆ ಹೋಗುವವರು ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚಾಗಿದ್ದಾರೆ. ಹೀಗಾಗಿ ಪ್ರದೇಶದ ಅಭಿವೃದ್ಧಿಗೆ ನಮ್ಮ ಸರ್ಕಾರ ವಿಶೇಷ ಒತ್ತು ನೀಡಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ವಿಶೇಷ ಒತ್ತು ನೀಡಿದೆ: ಡಿಸಿಎಂ ಕಾರಜೋಳ

ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಹಿಂದಿನ ಅವಧಿಯಲ್ಲಿ ಕಲಬುರಗಿಯಲ್ಲಿ ಸಂಪುಟ ಸಭೆ ನಡೆಸಿ, ಈ ಭಾಗದ ಯೋಜನೆಗಳಿಗೆ ಅನುದಾನ ನೀಡಿದ್ದರು. ಗುಲಾಮಗಿರಿಯ ಸಂಕೇತ ಕಳಚಲು ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ವರ್ಷದ ಹಿಂದೆ ನಾಮಕರಣ ಮಾಡಿದ್ದಾರೆ. ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಕನಸುಗಾರ ಎಂದು ಸಿಎಂ ಬಿಎಸ್​​ವೈ ಅವರನ್ನು ಬಣ್ಣಿಸಿದರು.

ಕಳೆದ ವರ್ಷ ರಾಜ್ಯದಲ್ಲಿ ಬರ, ನೆರೆ ಮತ್ತು ಪ್ರವಾಹದ ಸಂಕಷ್ಟ ಇತ್ತು. ಈ ವರ್ಷ ನೆರೆ ಮತ್ತು ಕೊರೊನಾ ಸಂಕಷ್ಟ ಎದುರಾಗಿದೆ. ಈ ಸಂಕಷ್ಟಗಳ ಮಧ್ಯೆಯೂ ನಮ್ಮ ಸರ್ಕಾರ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಸೇರಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಈ ಭಾಗದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ ಎಂದರು.

ABOUT THE AUTHOR

...view details