ಕರ್ನಾಟಕ

karnataka

ETV Bharat / state

ಕಲಬುರಗಿ; ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ - ಅತಿಥಿ ಉಪನ್ಯಾಸಕರ ಪ್ರತಿಭಟನೆ

ಬಾಕಿ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

Protest
Protest

By

Published : Jun 25, 2020, 7:17 PM IST

ಕಲಬುರಗಿ:ಬಾಕಿ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲಬುರ್ಗಿಯಲ್ಲಿ ಎಐಡಿಎಸ್ಒ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅತಿಥಿ ಉಪನ್ಯಾಸಕರ ಸಮಸ್ಯೆ ನಿವಾರಿಸುವಲ್ಲಿ ರಾಜ್ಯ ಸರ್ಕಾರ ಅಸಡ್ಡೆ ತೋರಿಸುತ್ತಿದೆ ಎಂದರು.

ಅಲ್ಲದೇ, ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,564 ಅತಿಥಿ ಉಪನ್ಯಾಸಕರು ಮತ್ತು 10 ಹಾಗೂ 12ನೇ ತರಗತಿಗಳಿಗೆ ಪಾಠ ಮಾಡಲು 22,150 ಅತಿಥಿ ಶಿಕ್ಷಕರಿದ್ದಾರೆ. 20 ವರ್ಷಗಳಿಂದ ದುಡಿಯುತ್ತಾ ಬಂದರೂ ಸೇವೆ ಕಾಯಂ ಮಾಡಿಲ್ಲ. ಗೌರವ ಧನವನ್ನೂ ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕೂಡಲೇ ಅತಿಥಿ ಉಪನ್ಯಾಸಕರು ಮತ್ತು ಶಿಕ್ಷಕರ ಸೇವೆ ಕಾಯಂ ಮಾಡಬೇಕು. ಬಾಕಿ ವೇತನ ಕೂಡಲೇ ಬಿಡುಗಡೆ ಮಾಡಿ ನೆರವಿಗೆ ಬರಬೇಕೆಂದು ಅತಿಥಿ ಉಪನ್ಯಾಸಕರು ಆಗ್ರಹಿಸಿದರು.

ABOUT THE AUTHOR

...view details