ಕಲಬುರಗಿ :ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರಕ್ಕೇರುವ ಕಸರತ್ತು ತೀವ್ರಗೊಂಡಿದೆ. ಹೀಗಾಗಿ, ಜೆಡಿಎಸ್ ಪಕ್ಷದ ನಾಲ್ವರು ಅಭ್ಯರ್ಥಿಗಳು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಳಿ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಲಬುರಗಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ 27, ಬಿಜೆಪಿ 23 ಹಾಗೂ ಜೆಡಿಎಸ್ 4 ಹಾಗೂ ಪಕ್ಷೇತರ 1 ಅಭ್ಯರ್ಥಿ ಬಂದಿರುವುದರಿಂದ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ಸರ್ಕಾರ ರಚನೆಗೆ ಎರಡು ರಾಷ್ಟ್ರೀಯ ಪಕ್ಷದ ನಾಯಕರು ತೀವ್ರ ಕಸರತ್ತು ನಡೆಸಿದ್ದಾರೆ.
ಇತ್ತ ಕಿಂಗ್ ಮೇಕರ್ ಆಗಿ ಹೊರಹೊಮ್ಮಿದ ಜೆಡಿಎಸ್ ಪಕ್ಷದ ನಾಲ್ವರು ಅಭ್ಯರ್ಥಿಗಳು ಬೆಂಗಳೂರಿಗೆ ತೆರಳಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ದೇವೇಗೌಡರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ.