ಕಲಬುರಗಿ: ಹಡಪದ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ ಹಡಪದ ಸಮುದಾಯದವರಿಂದ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಹಡಪದ ಸಮುದಾಯದಿಂದ ಅರೆಬೆತ್ತಲೆ ಪ್ರತಿಭಟನೆ - protest
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಲಬುರಗಿಯಲ್ಲಿ ಹಡಪದ ಸಮುದಾಯದವರಿಂದ ಅರೆಬೆತ್ತಲೆ ಪ್ರತಿಭಟನೆ ನಡೆಯಿತು.
ಅಖಿಲ ಕರ್ನಾಟಕ ಹಡಪದ ಸಮಾಜ ಜಿಲ್ಲಾ ಘಟಕದಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಹಡಪದ ಸಮುದಾಯದವರು ಪ್ರತಿಭಟನಾ ಮೆರವಣಿಗೆ ನಡೆಸಿದ್ರು. ಅರೆಬೆತ್ತಲೆಯಾಗಿ ಪ್ರತಿಭಟನೆ ಮಾಡುವ ಮೂಲಕ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ರು.
ಎಲ್ಲ ಸಮುದಾಯಕ್ಕೂ ಅಭಿವೃದ್ಧಿ ಮಂಡಳಿ ಸ್ಥಾಪಿಸಲಾಗಿದೆ. ಹಾಗೆಯೇ ನಮ್ಮ ಸಮುದಾಯಕ್ಕೂ ಪ್ರತ್ಯೇಕ ಅಭಿವೃದ್ಧಿ ಮಂಡಳಿ ನಿಗಮ ಸ್ಥಾಪಿಸುವಂತೆ ಆಗ್ರಹಿಸಿದರು ಮತ್ತು ಹಡಪದ ಸಮುದಾಯವನ್ನು ಪ್ರವರ್ಗ 01ಕ್ಕೆ ಸೇರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.