ಕಲಬುರಗಿ: ಸವಿತಾ ಸಮಾಜದ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಲಬುರ್ಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಸವಿತಾ ಸಮಾಜದ ಕುರಿತು ಅವಹೇಳನಕಾರಿ ಹೇಳಿಕೆ.. ಸಿದ್ದರಾಮಯ್ಯ ವಿರುದ್ದ ಭುಗಿಲೆದ್ದಆಕ್ರೋಶ - ಅಖಿಲ ಕರ್ನಾಟಕ ಹಡಪದ ಸಮಾಜ ಸೇವಾ ಸಂಘ
ಸವಿತಾ ಸಮಾಜದ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅಖಿಲ ಕರ್ನಾಟಕ ಹಡಪದ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಲಬುರ್ಗಿಯಲ್ಲಿ ಪ್ರತಿಭಟನೆ
'ಅಖಿಲ ಕರ್ನಾಟಕ ಹಡಪದ ಸಮಾಜ ಸೇವಾ ಸಂಘ'ದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ಕಾರ್ಯಕರ್ತರು, ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಸಿದ್ದರಾಮಯ್ಯರ ಅಣಕು ಶವಯಾತ್ರೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಹಾಗೂ ಈಶ್ವರಪ್ಪ ರಾಜಕೀಯ ಒಳಜಗಳದ ಗುದ್ದಾಟದಲ್ಲಿ ನಮ್ಮ ಸಮಾಜದ ಬಗ್ಗೆ ಅವಹೇಳನ ಮಾಡಲಾಗಿದೆ. ಕೂಡಲೇ ಸಿದ್ದರಾಮಯ್ಯ ಸವಿತಾ ಸಮುದಾಯದ ಬಹಿರಂಗ ಕ್ಷಮೆಯಾಚಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.