ಕಲಬುರಗಿ: ಜಿಲ್ಲೆಯಲ್ಲಿ ಗುಡುಗು ಸಿಡಿಲುಸಹಿತ ಧಾರಾಕಾರ ಅಕಾಲಿಕ ಮಳೆ ಸುರಿದಿದೆ. ಸಿಡಿಲಿಗೆ ಓರ್ವ ಮಹಿಳೆ ಬಲಿಯಾಗಿದ್ದಾರೆ. ಚಿಂಚೋಳಿ ತಾಲೂಕಿನ ಶಿವರೆಡ್ಡಿಪಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ನಾಗಮಣಿ ಜೋಗ್ (30) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.
ಕಲಬುರಗಿ ಜಿಲ್ಲೆಯಲ್ಲಿ ವರುಣನ ಅಬ್ಬರ: ಸಿಡಿಲು ಬಡಿದು ಮಹಿಳೆ ಸಾವು - Woman died from a thunderbolt
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿವರೆಡ್ಡಿಪಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಓರ್ವ ಮಹಿಳೆ ಸಾವಿಗೀಡಾಗಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದೆ.
ಡಿಲು ಬಡಿದು ಮಹಿಳೆ ಸಾವು
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ನಾಗಮಣಿ ಸಾವಿಗೀಡಾಗಿದ್ದಾರೆ. ಇವರ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಇನ್ನೂ ಇಬ್ಬರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಇಬ್ಬರು ಬಾಲಕಿಯರ ಬದುಕಲ್ಲಿ ವಿಧಿಯ 'ಕಣ್ಣಾಮುಚ್ಚಾಲೆ': ಐಸ್‌ಕ್ರೀಂ ಬಾಕ್ಸ್‌ನಲ್ಲೇ ಉಸಿರುಗಟ್ಟಿ ಸಾವು!