ಕಲಬುರಗಿ: ಜಿಲ್ಲೆಯಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಯಶವಂತ ಗುರುಕರ್ ಆದೇಶ ಹೊರಡಿಸಿದ್ದಾರೆ.
ಇಂದಿನಿಂದಲೇ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನಾಳೆ ಶನಿವಾರ ಮತ್ತು ಭಾನುವಾರ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಜಿಲ್ಲೆಯ ಕೆಲವೆಡೆ ರೆಡ್ ಹಾಗೂ ಯಲ್ಲೋ ಅಲರ್ಟ್ ಘೋಷಿಸಿದೆ. ಮಳೆ ಅಬ್ಬರ ಶುರುವಾದರೆ ಮಕ್ಕಳಿಗೆ ತೊಂದರೆ ಆಗುವ ಕಾರಣಕ್ಕೆ ಶನಿವಾರ ಒಂದು ದಿನ ಅಂಗನವಾಡಿ ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಯಶವಂತ ಗುರುಕರ್ ರಜೆ ಘೋಷಣೆ ಮಾಡಿದ್ದಾರೆ.