ಕಲಬುರಗಿ:ನಗರದಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಗೆ ಮರಗಳು ಧರೆಗುರುಳಿದ್ದು, ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾಯಿತು.
ಕಲಬುರಗಿಯಲ್ಲಿ ಬಿರುಗಾಳಿ ಮಳೆಗೆ ಧರೆಗುರುಳಿದ ವೃಕ್ಷ - ಮಳೆ
ಕಲಬುರಗಿ ನಗರದಲ್ಲಿ ಬಿರುಗಾಳಿ ಸಹಿತ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಮಳೆಯ ರಭಸಕ್ಕೆ ಕೋರ್ಟ್ ರಸ್ತೆಯ ಬದಿಯ ಮರ ಧರೆಗೆ ಉರುಳಿದೆ. ಇದರಿಂದ ಕೆಲಹೊತ್ತು ಸಂಚಾರ ಅಸ್ತವ್ಯಸ್ತಗೊಂಡು ವಾಹನ ಪ್ರಯಾಣಿಕರು ಪರದಾಡುವಂತಾಯಿತು.
Heavy Rain in Kalaburagi
ನಗರ ಸೇರಿದಂತೆ ಹಲವೆಡೆ ಧಾರಾಕಾರ ಸುರಿದಿದೆ. ಏಕಾಏಕಿ ಬೀಸಿದ ವಿಪರೀತ ಗಾಳಿಯಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಕೋರ್ಟ್ ರಸ್ತೆ ಬಳಿ ಇರುವ ಮರ ನೆಲಕ್ಕುರುಳಿದೆ. ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ.
ಮರ ರಸ್ತೆಗೆ ಅಡ್ಡಲಾಗಿ ಧರೆಗುರುಳಿದ್ದರಿಂದ ಕೆಲ ಕಾಲ ರಸ್ತೆ ಸಂಚಾರ ಬಂದ್ ಆಯಿತು. ಇದರಿಂದ ವಾಹನ ಸವಾರರು ಪರದಾಡುವಂತಾಗಿ ಬದಲಿ ಮಾರ್ಗದ ಮೂಲಕ ತೆರಳಿದರು.