ಕಲಬುರಗಿ: ಜಿಲ್ಲೆಯಲ್ಲಿ ತಡರಾತ್ರಿ ಧಾರಾಕಾರ ಮಳೆ ಸುರಿದಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಇನ್ನೊಂದೆಡೆ, ಧಾರಾಕಾರ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಕಲಬುರಗಿ ತಾಲ್ಲೂಕಿನ ಮುತ್ಯಾನ್ ಬಬಲಾದ್ ಹಳ್ಳ ತುಂಬಿ ಹರಿಯುತ್ತಿದ್ದು ಬಬಲಾದ್, ಹೊಡಲ್, ಶ್ರೀಚಂದ, ಅಪಚಂದ, ಗ್ರಾಮಗಳಿಗೆ ರಸ್ತೆ ಸಂಪರ್ಕಕ್ಕೆ ತೊಂದರೆಯಾಗಿದೆ. ಸಾರಿಗೆ ಬಸ್ ಸಂಚಾರವೂ ಇಲ್ಲದಂತಾಗಿದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು, ನೌಕರರು ಸಂಕಷ್ಟ ಅನುಭವಿಸುತ್ತಿದ್ದಾರೆ.