ಕಲಬುರಗಿ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ರೈತರ ಬೆಳೆಗಳು ಸಂಪೂರ್ಣ ನೀರು ಪಾಲಾಗಿವೆ. ಕಳೆದ ಕೆಲವು ದಿನಗಳಿಂದ ಮಳೆ ಸುರಿಯುತ್ತಿದ್ದು, ರೈತರ ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳು ನೀರಲ್ಲಿ ಕೊಚ್ಚಿಕೊಂಡು ಹೋಗಿವೆ.
ಕಲಬುರಗಿ ಜಿಲ್ಲೆಯ ಬಹುತೇಕ ಎಲ್ಲಾ ತಾಲೂಕು ಪ್ರದೇಶಗಳಲ್ಲಿಯೂ ಭಾರಿ ಮಳೆ ಸುರಿದಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಈಗಾಗಲೇ ರೈತರು ತೊಗರಿ, ಹತ್ತಿ ಸೇರಿದಂತೆ ಅನೇಕ ಬೆಳೆಗಳನ್ನು ಬಿತ್ತನೆ ಮಾಡಿದ್ದರು. ಬೆಳೆಯು ಕೂಡ ಹುಲುಸಾಗಿ ಬೆಳೆದಿತ್ತು. ಆದರೆ ಅತಿಯಾದ ಮಳೆಯಿಂದ ಬೆಳೆ ಹಾನಿಯಾಗಿವೆ.
ಕಲಬುರಗಿಯಲ್ಲಿ ಮಳೆಯಿಂದ ಬೆಳೆ ಹಾನಿ ಜಿಲ್ಲೆಯ ಜಂಬಗಾ ಗ್ರಾಮದಲ್ಲಿ ಮಳೆಯಿಂದ ರೈತರು ತಮ್ಮ ಜಮೀನಿನಲ್ಲಿ ಸಾಲಮಾಡಿ ಬೆಳೆದಿದ್ದ ಹತ್ತಿ, ತೊಗರಿ, ಸೋಯಾಬಿನ್ ಮತ್ತು ಹೆಸರು ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಸಾಲ-ಸೋಲ ಮಾಡಿ ಬೆಳೆದ ಬೆಳೆಗಳು ಸಂಪೂರ್ಣ ಹಾಳಾಗಿದ್ದು ರಾಜ್ಯ ಸರಕಾರ ನಮ್ಮ ಬೆಳೆಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯ ಮಾಡಿದ್ದಾರೆ. ಪ್ರತಿ ಎಕರೆಗೆ 20 ಸಾವಿರ ರೂಪಾಯಿ ಪರಿಹಾರ ನೀಡಿದ್ರೆ ಬದುಕುತ್ತೇವೆ. ಇಲ್ಲದೇ ಹೋದ್ರೆ ಸತ್ತು ಹೋಗುತ್ತೇವೆ ಎಂದು ಜಂಬಗಾ ಗ್ರಾಮದ ರೈತರು ಅಳಲು ತೋಡಿಕೊಂಡಿದ್ದಾರೆ.
ಇದನ್ನೂ ಓದಿ:ಹಲ್ಲೆಗೆ ಯತ್ನ ಎಂದು ಉಳ್ಳಾಲ ಸುರತ್ಕಲ್ನಲ್ಲಿ ವದಂತಿ- ಶಾಂತಿಗೆ ಸಹಕರಿಸಿ ಎಂದು ಕಮೀಷನರ್ ಮನವಿ