ಸೇಡಂ: ಪಟ್ಟಣದಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಸಿಡಿಲು ಬಡಿದು ತೆಂಗಿನ ಮರವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ಮರದಲ್ಲಿ ಬೆಂಕಿ..
ಸೇಡಂ: ಪಟ್ಟಣದಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಸಿಡಿಲು ಬಡಿದು ತೆಂಗಿನ ಮರವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಸೋಮವಾರ ಸಂಜೆ ತಾಲೂಕಿನ ಬಹುತೇಕ ಗ್ರಾಮಗಳಲ್ಲೂ ಮಳೆಯಾಗಿದೆ. ಕಾಚೂರ ಗ್ರಾಮದ ನಾಗರಾಜ ಮಾಲಿ ಪಾಟೀಲ ಎಂಬುವರ ಮನೆಯ ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ಮರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಇದನ್ನು ಕಂಡ ತಕ್ಷಣವೇ ಎಚ್ಚೆತ್ತ ಮನೆಯವರು ಬೆಂಕಿ ನಂದಿಸಿದ್ದಾರೆ. ಇದರಿಂದಾಗಿ ಯಾವುದೇ ರೀತಿಯ ಅನಾಹುತ ಸಂಭವಿಸಿಲ್ಲ.