ಕಲಬುರಗಿ: ಜಿಲ್ಲೆಯಲ್ಲಿ ನಿನ್ನೆಯಿಂದ ಸತತ ಮಳೆ ಸುರಿಯುತ್ತಿದ್ದು, ಸುಮಾರು 10ಕ್ಕೂ ಅಧಿಕ ಗ್ರಾಮಗಳು ಜಲಾವೃತಗೊಂಡಿವೆ.
ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಆರ್ಭಟ: 10ಕ್ಕೂ ಅಧಿಕ ಗ್ರಾಮಗಳು ಜಲಾವೃತ - Kalburgi
ಕಲಬುರಗಿ ಜಿಲ್ಲೆಯಾದ್ಯಂತ ಮಳೆ ಆರ್ಭಟ ಜೋರಾಗಿದ್ದು, ಹಲವೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಚಿಂಚೋಳಿ ತಾಲೂಕಿನಲ್ಲಿ ಧಾರಾಕಾರ ಮಳೆಯಿಂದ ಹಲವು ಗ್ರಾಮಗಳು ಜಲಕಂಟಕ ಎದುರಿಸುತ್ತಿವೆ. ಹಳ್ಳಕೊಳ್ಳಗಳು ಮೈದುಂಬಿ ಹರಿಯುತ್ತಿದ್ದು, ಸೇತುವೆಗಳ ಮೇಲೆ ರಸ್ತೆಗಳ ಮೇಲೆ ಮಳೆ ನೀರು ರಭಸವಾಗಿ ಹರಿಯುತ್ತಿದೆ. ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ರೈತರ ಬೆಳೆ ಕೊಳೆತು ಹಾನಿಯಾಗಿದೆ. ಹಲವು ಮನೆಗಳಿಗೆ ಮಳೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವೆಡೆ ಮನೆಗಳು ಕುಸಿಯುತ್ತಿವೆ. ಮನುಷ್ಯರು ಮಾತ್ರವಲ್ಲದೆ ಪ್ರಾಣಿಗಳು ಸಹ ಮಳೆಯಿಂದ ಪ್ರಾಣ ರಕ್ಷಿಸಿಕೊಳ್ಳಲು ಹರಸಾಹಸ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಇಂದು ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ ಮನೆ ಮಾಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರು ಪಾಲ್ಗೊಳ್ಳಲಿದ್ದಾರೆ. ಸಂಭ್ರಮಕ್ಕೂ ಮಳೆ ಅಡ್ಡಿಪಡಿಸುವ ಸಾಧ್ಯತೆಯಿದೆ.