ಕಲಬುರಗಿ: ರಾಜ್ಯದ ಟೆಕ್ಕಿಯೊಬ್ಬರಲ್ಲಿ ಕೊರೊನಾ ವೈರಸ್ ಪತ್ತೆಯಾದ ಬೆನ್ನಲ್ಲೇ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದ್ದು, ಕೊರೊನಾ ತಡೆಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ರಾಜ್ಯದ ಟೆಕ್ಕಿಯೊಬ್ಬರಲ್ಲಿ ಕೊರೊನಾ ವೈರಸ್ ಪತ್ತೆ: ಕಲಬುರಗಿಯಲ್ಲಿ ಸೂಕ್ತ ವ್ಯವಸ್ಥೆ - ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕೊರೊನಾ ವೈರಸ್
ಕೊರೊನಾ ವೈರಸ್ ಆತಂಕ ಸೃಷ್ಟಿಸಿದ್ದು, ಕಲ್ಯಾಣ ಕರ್ನಾಟಕದಲ್ಲಿ ಜಿಲ್ಲಾಡಳಿತ ಸೂಕ್ತ ರೀತಿಯ ವ್ಯವಸ್ಥೆ ಕೈಗೊಂಡಿದೆ.
ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಏರ್ಪೋರ್ಟ್, ಸೂಪರ್ ಮಾರ್ಕೆಟ್ ಹೀಗೆ ಜನಸಂದಣಿ ಹೆಚ್ಚಿರುವ ಸ್ಥಳಗಳಲ್ಲಿ ಬ್ಯಾನರ್, ಪಾಂಪ್ಲೆಟ್ಸ್ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಮಾರಕ ವೈರಸ್ ಜಿಲ್ಲೆಗೆ ಸುಳಿಯದಂತೆ ತಡೆಗಟ್ಟಲು ಅಧಿಕಾರಿಗಳ 6 ತಂಡ ರಚನೆ ಮಾಡಿದ್ದು, ಜಿಲ್ಲೆಯಾದ್ಯಂತ ಜಾಗೃತಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಆಂಧ್ರ, ತೆಲಂಗಾಣ ಗಡಿ ಭಾಗದಲ್ಲಿಯೂ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ 5 ಬೆಡ್ಗಳ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ಅಲ್ಲದೇ ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ 2 ಬೆಡ್ಗಳ ಐಸೋಲೆಟೆಡ್ ವಾರ್ಡ್ ತೆರೆಯಲಾಗಿದ್ದು ವೈದ್ಯರನ್ನು ನೇಮಿಸಲಾಗಿದೆ. ಪತ್ರಿಕೆ, ರೆಡಿಯೋ ಮಾಧ್ಯಮಗಳ ಮೂಲಕವೂ ಸಾರ್ವಜನಿಕರಲ್ಲಿ ಕೊರೊನಾ ವೈರಸ್ ಕುರಿತು ಎಚ್ಚರ ವಹಿಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಸ್ವಚ್ಛತೆ ಸೇರಿದಂತೆ ಮೂರು ಲೇಯರ್ ಮಾಸ್ಕ್ ಬಳಸುವಂತೆ ಮನವಿ ಮಾಡಿರುವ ಜಿಲ್ಲಾಧಿಕಾರಿ ಬಿ. ಶರತ್, ಜ್ವರ, ಕೆಮ್ಮು, ಶೀತ ಹೀಗೆ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ್ರೂ ತಕ್ಷಣ ವೈದ್ಯರನ್ನು ಸಂಪರ್ಕಿಸಿ ತಪಾಸಣೆ ಮಾಡಿಸುಕೊಳ್ಳುವಂತೆ ಮನವಿ ಮಾಡಿದ್ದಾರೆ.