ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಬಿಜೆಪಿ ಮುಖಂಡ ರಾಜೇಶ್ಗೆ ಐದೂವರೆ ತಿಂಗಳ ನಂತರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪರೀಕ್ಷೆ ಅಕ್ರಮದ ಕೇಂದ್ರ ಬಿಂದುವಾದ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಹಾಗೂ ಅಕ್ರಮದ ಕಿಂಗ್ಪಿನ್ ಗಳಲ್ಲಿ ಒಬ್ಬರಾದ ದಿವ್ಯಾ ಹಾಗರಗಿ ಅವರ ಪತಿ ರಾಜೇಶ ಹಾಗರಗಿಯನ್ನು ಪ್ರಕರಣದ ಕುರಿತು ಏಪ್ರೀಲ್ 7 ರಂದು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿ ಜೈಲಿಗೆ ಕಳುಹಿಸಿದ್ದರು.
ರಾಜೇಶ್ ಹಾಗರಗಿ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಪಡೆಯಲು ಪ್ರಯತ್ನ ಪಟ್ಟಿದ್ದರು. ಆದರೇ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಪತಿ ಎಂಬ ಕಾರಣಕ್ಕೆ ಹಾಗು ಸಿಐಡಿ ಅಧಿಕಾರಿಗಳು ಅಕ್ಷೇಪಣಾ ಅರ್ಜಿ ಸಲ್ಲಿಸಿದ್ದರಿಂದ ಜಾಮೀನು ನೀಡಿರಲಿಲ್ಲ. ಇದೀಗ ಹಲವು ಷರತ್ತು ವಿಧಿಸಿ ನ್ಯಾಯಾಲಯ ರಾಜೇಶ್ ಅವರಿಗೆ ಜಾಮೀನು ನೀಡಿದೆ.
ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಪತಿ ಎಂಬ ಕಾರಣಕ್ಕೆ ಜಾಮೀನು ನಿರಾಕರಿಸಲಾಗದು. ಆರೋಪ ಸಾಬೀತುಪಡಿಸುವ ದಾಖಲೆಗಳು ಇರಬೇಕು. ಐಪಿಸಿ ಸೆಕ್ಷನ್ 212 ಹೊರತುಪಡಿಸಿ, ಅರ್ಜಿದಾರ ಆರೋಪಿ ವಿರುದ್ಧ ಗಂಭೀರ ಆರೋಪಗಳು ಕಾಣುತ್ತಿಲ್ಲವಾದ್ದರಿಂದ ಪೀಠ ಜಾಮೀನು ನೀಡಲು ನಿರ್ಧರಿಸಿದೆ ಎಂದು ನ್ಯಾಯಮೂರ್ತಿ ಎಂ.ಜಿ. ಉಮಾ ಅವರ ನೇತೃತ್ವದ ಏಕಸದಸ್ಯ ಪೀಠ ಜಾಮೀನು ಆದೇಶದಲ್ಲಿ ಹೇಳಿದೆ.
ಇದನ್ನೂ ಓದಿ:Big News: ಪಿಎಫ್ಐಗೆ ಕೇಂದ್ರದ ಅಂಕುಶ.. ಸಂಘಟನೆ ನಿಷೇಧಿಸಿ ಮಹತ್ವದ ಆದೇಶ