ಕಲಬುರಗಿ: ಕಳೆದ ಎರಡು ದಿನಗಳಿಂದ ಕಲಬುರಗಿ ಜಿಲ್ಲೆಯ ಪ್ರವಾಸದಲ್ಲಿರುವ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಜಸ್ಟಿಸ್ ಬಿ ವೀರಪ್ಪ ನಗರದ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾರಾಗೃಹದಲ್ಲಿ ಕೈದಿಗಳಿಗೆ ಕೊಡುವ ಆಹಾರ ಸೇರಿದಂತೆ ಜೈಲಲ್ಲಿರುವ ಸೌಲಭ್ಯಗಳನ್ನು ನ್ಯಾಯಮೂರ್ತಿಗಳು ಪರಿಶೀಲಿಸಿದರು. ಕೈದಿಗಳ ಆಹಾರ ತಯಾರಿಸುವ ಸ್ಥಳಕ್ಕೆ ತೆರಳಿ ಸ್ವಚ್ಛತೆ, ಆಹಾರ ಪದಾರ್ಥಗಳನ್ನು ಪರಿಶೀಲನೆ ಮಾಡಿದ ನ್ಯಾಯಮೂರ್ತಿಗಳು, ಸ್ವತಃ ತಾವೇ ಕೈಯಲ್ಲಿ ಮುಟ್ಟಿ ಸಾಂಬಾರ್ ಗುಣಮಟ್ಟ ಪರೀಕ್ಷಿಸಿದರು.