ಕಲಬುರಗಿ: ರಾಜ್ಯ ಸರ್ಕಾರ ಅಭಿವೃದ್ಧಿ ವಿಷಯದಲ್ಲಿ ಹೈದರಾಬಾದ್ ಕರ್ನಾಟಕವನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ.
ಹೈದರಾಬಾದ್ ಕರ್ನಾಟಕ ನಿರ್ಲಕ್ಷ್ಯಕ್ಕೆ ಕೆಂಡಾಮಂಡಲ: ಪಾದಯಾತ್ರೆ - ಸಿಎಂ
ರಾಜ್ಯ ಸರ್ಕಾರ ಅಭಿವೃದ್ಧಿ ವಿಷಯದಲ್ಲಿ ಹೈದರಾಬಾದ್ ಕರ್ನಾಟಕವನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ.
ಇನ್ನು ಈ ಪಾದಯಾತ್ರೆ ಜಿಲ್ಲೆಯ ವಿ.ಕೆ.ಸಲಗರ ಗ್ರಾಮದಿಂದ ಸಿಎಂ ಗ್ರಾಮ ವಾಸ್ತವ್ಯ ಮಾಡಲಿರುವ ಬಸವಕಲ್ಯಾಣ ತಾಲೂಕಿನ ಉಚಳಂಬ ಗ್ರಾಮದವರೆಗೂ ನಡೆಯಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೋರಾಟಗಾರರು ಮೊದನಿಂದಲೂ ಎಚ್.ಡಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ಹೈದರಾಬಾದ್ ಕರ್ನಾಟಕ ಪ್ರದೇಶವನ್ನು ಕಡೆಗಣಿಸುತ್ತಾ ಬರುತ್ತಿದೆ.
ನೇಮಕಾತಿ, ಶಿಕ್ಷಣ, ಉದ್ಯೋಗ, ಅಭಿವೃದ್ಧಿ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಪಾದಯಾತ್ರಾರ್ಥಿಗಳು ಆರೋಪಿಸಿದರು. ಹೈ.ಕ. ಭಾಗಕ್ಕೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಸಿಎಂಗೆ ಮನವಿ ಪತ್ರ ಸಲ್ಲಿಸಲು ಸಮಿತಿ ಮುಖಂಡರು ತಿರ್ಮಾನಿಸಿದ್ದಾರೆ.