ಕಲಬುರಗಿ:ಗೋ ಮಾಂಸ ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾದ ಕಾರಣ ಟ್ರಕ್ ಅಡ್ಡಗಟ್ಟಿ ಹಿಂದೂಪರ ಸಂಘಟನೆಗಳ ಪ್ರತಿಭಟಿಸಿರುವ ಘಟನೆ ನಗರದ ರಾಮ ಮಂದಿರ ರಿಂಗ್ ರಸ್ತೆಯಲ್ಲಿ ನಡೆದಿದೆ.
ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಟ್ರಕ್ ತಡೆದ ಹಿಂದೂಪರ ಸಂಘಟನೆ - Beef smuggling in kalaburagi
ಟ್ರಕ್ವೊಂದರಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸಲಾಗುತ್ತಿದೆ ಎಂಬುದನ್ನು ತಿಳಿದ ಹಿಂದೂಪರ ಸಂಘಟನೆ ಕಾರ್ಯಕರ್ತರು ಟ್ರಕ್ವೊಂದನ್ನು ಅಡ್ಡಗಟ್ಟಿ, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಬರುವಂತೆ ಆಗ್ರಹಿಸಿದರು. ಸ್ಥಳಕ್ಕಾಗಮಿಸಿದ ಪೊಲೀಸರು ಉದ್ರಿಕ್ತರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ರು.
ಪೊಲೀಸರಿಂದ ಲಘು ಲಾಠಿ ಪ್ರಹಾರ
ಟ್ರಕ್ನಲ್ಲಿ ರಕ್ತ ಸುರಿಯುವುದನ್ನು ಗಮನಿಸಿದ ಕೆಲವರು ಟ್ರಕ್ ನಿಲ್ಲಿಸಿದ್ದರು. ಅಲ್ಲದೆ ಕೆಲ ಕಿಡಿಗೇಡಿಗಳು ಟ್ರಕ್ ಮೇಲೆ ಕಲ್ಲು ತೂರಾಡಿ, ಟ್ರಕ್ ಗಾಜುಗಳನ್ನು ಪುಡಿಗೊಳಿಸಿದ್ದಾರೆ. ಇದರಿಂದ ಕೆಲಹೊತ್ತು ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡುವಂತೆ ಸಂಘಟನೆ ಕಾರ್ಯಕರ್ತರು ಪಟ್ಟುಹಿಡಿದಿದ್ದರು.
ಬಳಿಕ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಉದ್ರಿಕ್ತರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಶಹಾಪುರದಿಂದ ತೆಲಂಗಾಣದ ಜಹೀರಾಬಾದ್ ಗೆ ಮಾಂಸ ಸಾಗಿಸಲಾಗುತ್ತಿತ್ತು ಎನ್ನಲಾಗ್ತಿದೆ.
Last Updated : Aug 28, 2019, 11:31 AM IST