ಕಲಬುರಗಿ: ಬಿಸಿಎಂ ಅಧಿಕಾರಿ ರಮೇಶ್ ಸಂಗಾ ವರ್ಗಾವಣೆ ರದ್ದುಪಡಿಸುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ಹಾಸ್ಟೆಲ್ ನೌಕರರು ಪ್ರತಿಭಟನೆ ನಡೆಸಿದರು.
ಬಿಸಿಎಂ ಅಧಿಕಾರಿ ರಮೇಶ್ ಸಂಗಾ ವರ್ಗಾವಣೆ ರದ್ದುಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ
ಬಿಸಿಎಂ ಅಧಿಕಾರಿ ರಮೇಶ್ ಸಂಗಾ ವರ್ಗಾವಣೆ ರದ್ದುಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರ ಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರ ಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದ ನೌಕರರು, ಬಿಸಿಎಂ ಅಧಿಕಾರಿ ರಮೇಶ್ ಸಂಗಾ ವರ್ಗಾವಣೆಯನ್ನು ಖಂಡಿಸಿದರು. ರಮೇಶ್ ಸಂಗಾ ಅವರು ತಮ್ಮ ಅಧಿಕಾರ ಅವಧಿಯಲ್ಲಿ ದಕ್ಷತೆ ಮೆರೆಯುವ ಮೂಲಕ ನೌಕರರ ಪರ ಕಾಳಜಿ ಉಳ್ಳವರಾಗಿದ್ದರು. ಆದ್ದರಿಂದ ಸರ್ಕಾರ ರಮೇಶ್ ಸಂಗಾ ವರ್ಗಾವಣೆಯನ್ನು ರದ್ದುಗೊಳಿಸಿ ಮತ್ತೆ ಕಲಬುರಗಿಯಲ್ಲಿ ಸೇವೆಯಲ್ಲಿ ಮುಂದುವರಿಸುವಂತೆ ಒತ್ತಾಯಿಸಿದ್ದಾರೆ.
ಇನ್ನು ಹಾಸ್ಟೆಲ್ ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರ ಬಾಕಿ ವೇತನ ಹಾಗೂ ಕೋವಿಡ್ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.