ಕಲಬುರಗಿ:ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಅಧಿಕಾರಿವೋರ್ವ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ ಜಿಲ್ಲೆಯ ಅಫ್ಜಲ್ಪುರ ಪಟ್ಟಣದಲ್ಲಿ ಕೇಳಿಬಂದಿದೆ.
ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಹಾಸ್ಟೆಲ್ ವಿದ್ಯಾರ್ಥಿಗಳ ಪ್ರತಿಭಟನೆ... ಅಧಿಕಾರಿಯಿಂದ ನಿಂದನೆ ಆರೋಪ - kalaburagi latest news
ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಅಧಿಕಾರಿವೋರ್ವ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ ಕೇಳಿಬಂದಿದೆ. ಅಫ್ಜಲ್ಪುರ ಪಟ್ಟಣದಲ್ಲಿ ನಡೆದಿದೆ. ಸದ್ಯ ಅಧಿಕಾರಿಯ ವರ್ತನೆಗೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳು ಎರಡು ದಿನದಿಂದ ಊಟ ಮತ್ತಿತರ ಮೂಲ ಸೌಕರ್ಯಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ನಿನ್ನೆ ಸಂಜೆಯಿಂದ ಹಾಸ್ಟೆಲ್ ಮುಂದೆ ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳು, ಅಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನೆಲೆ ಇಂದು ತಾಲೂಕು ಹಿಂದುಳಿದ ವರ್ಗಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುತ್ತಿತ್ತು.
ತಡವಾಗಿ ಸ್ಥಳಕ್ಕಾಗಮಿಸಿದ ತಾಲೂಕು ಬಿಸಿಎಂ ಅಧಿಕಾರಿ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಶರಣಬಸಪ್ಪ ಮೂಲಿಮನಿ ವಿದ್ಯಾರ್ಥಿಗಳಿಗೆ ನಿಂದಿಸಿರುವ ಆರೋಪ ಎದುರಿಸುತ್ತಿರುವ ತಾಲೂಕು ಬಿಸಿಎಂ ಅಧಿಕಾರಿ. ಅಧಿಕಾರಿಯ ವರ್ತನೆಗೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.