ಕಲಬುರಗಿ: ಕೇಂದ್ರ ಸರ್ಕಾರ 18 ಲಕ್ಷ ಮನೆಗಳನ್ನು ರಾಜ್ಯಕ್ಕೆ ನೀಡಿದೆ. ಪ್ರಸ್ತುತ ರಾಜ್ಯ ಸರ್ಕಾರದ ಅವಧಿ ಮುಗಿಯೋದರೊಳಗೆ 8 ರಿಂದ 10 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದರು.
ನಗರದಲ್ಲಿಂದು ಮಾತನಾಡಿದ ಅವರು, ಕೇಂದ್ರ ಸರ್ಕಾರ ಹತ್ತಾರು ಯೋಜನೆಗಳನ್ನು ರಾಜ್ಯಕ್ಕೆ ನೀಡಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿನ ಗೊಂದಲ ನಿವಾರಣೆ ಮಾಡಲಾಗಿದೆ. ಅಲ್ಲದೇ ಕರ್ನಾಟದಕ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಮಂಗಳಮುಖಿಯರಿಗೆ ಮನೆಗಳನ್ನು ನಿರ್ಮಿಸಿಕೊಡಲಾಗ್ತಿದೆ. ಬೆಂಗಳೂರಿನ ಕೆಂಗೇರಿ ಬಳಿ ಈಗಾಗಲೇ ಮನೆಗಳನ್ನು ನಿರ್ಮಿಸಲಾಗ್ತಿದೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಪೈಲಟ್ ಯೋಜನೆ ಜಾರಿಗೆ ತರಲಾಗ್ತಿದೆ. ಗ್ರಾಮೀಣ ಭಾಗದಲ್ಲಿ ವಸತಿ ವ್ಯವಸ್ಥೆ ಬಗ್ಗೆ ಸರ್ವೇ ಮಾಡಲಾಗ್ತಿದೆ. ಜೂ. 30ರೊಳಗೆ ಸರ್ವೇ ಮುಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.