ಕಲಬುರಗಿ: ಯಾರೇ ನಮ್ಮ ಪಕ್ಷಕ್ಕೆ ಬಂದರೂ ಬಿಜೆಪಿ ಅವರಿಗೆ ಸದಾ ಬಾಗಿಲು ತೆಗೆದಿರುತ್ತದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟಿದ್ದಾರೆ.
ಮತ್ತೆ ಆಪರೇಷನ್ ಕಮಲದ ಬಗ್ಗೆ ನನಗೇನೂ ಗೊತ್ತಿಲ್ಲ... ಯಾರೇ ಬಂದ್ರೂ ಸ್ವಾಗತ: ಕಾರಜೋಳ ಬಾಂಬ್ - ಕಲ್ಯಾಣ ಕರ್ನಾಟಕದ ಅಭಿವೃದ್ಧಿ
ನಮ್ಮ ಪಕ್ಷಕ್ಕೆ ಯಾರೇ ಬಂದರೂ ಪಕ್ಷದ ಬಾಗಿಲು ತೆರೆದೇ ಇರುತ್ತದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ಕಲಬುರ್ಗಿಯಲ್ಲಿ ಮಾತನಾಡಿದ ಕಾರಜೋಳ, ಉಪ ಚುನಾವಣೆ ನಂತರ ರಾಜ್ಯದಲ್ಲಿ ಅಪರೇಷನ್ ಕಮಲ ನಡೆಯಲಿದೆ, ಜೆಡಿಎಸ್ 12 ಶಾಸಕರು ಪಕ್ಷಕ್ಕೆ ಗುಡ್ ಬೈ ಹೇಳ್ತಾರೆ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ಆ 12 ಶಾಸಕರ ಯಾವುದೇ ವಿಚಾರ ನನಗೆ ಗೊತ್ತಿಲ್ಲ. ಆದ್ರೆ ನಮ್ಮ ಪಕ್ಷದ ಬಾಗಿಲು ಯಾವಾಗಲೂ ತೆಗೆದಿರುತ್ತೆ. ಯಾರೇ ನಮ್ಮ ಪಕ್ಷಕ್ಕೆ ಬಂದ್ರೂ ಸ್ವಾಗತ ಮಾಡ್ತೇವೆ ಎಂದು ಹೇಳುವ ಮೂಲಕ ಕಾರಜೋಳ, ಪರೋಕ್ಷವಾಗಿ ಜೆಡಿಎಸ್ ಶಾಸಕರಿಗೆ ಆಫರ್ ಕೊಟ್ಟಿದ್ದಾರೆ.
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದೆ. ಆದರೆ, ನಿರೀಕ್ಷಿತ ಮಟ್ಟದ ಅಭಿವೃದ್ಧಿ ಸಾಧಿಸಲಾಗಿಲ್ಲ. ಈ ನಿಟ್ಟಿನಲ್ಲಿ ತಾವು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ವಹಿಸಿಕೊಂಡ ನಂತರ ಕೆಲ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿಗಳು ಭರವಸೆ ನೀಡಿದರು.