ಕಲಬುರಗಿ: ಮೋದಿ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಗುತ್ತದೆ ಎಂದು ನಿರೀಕ್ಷಿಸಿದ್ದೆ. ಆದರೆ ಮೊದಲ ಹಂತದಲ್ಲಿ ಸಿಕ್ಕಿಲ್ಲ. ನನಗೆ ಜವಾಬ್ದಾರಿ ಕೊಟ್ರೆ ನಿಭಾಯಿಸುವುದಾಗಿ ಹೇಳಿದ್ದೆ ಎಂದು ನೂತನ ಸಂಸದ ಉಮೇಶ್ ಜಾಧವ್ ತಿಳಿಸಿದ್ದಾರೆ.
ಮೋದಿ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಗುತ್ತದೆ ಎಂದು ನಿರೀಕ್ಷಿಸಿದ್ದೆ: ಉಮೇಶ್ ಜಾಧವ್ - ಸಂಪುಟ
ಖರ್ಗೆ ವಿರುದ್ಧ ಕಣಕ್ಕಿಳಿದು ಗೆದ್ದು ಲೋಕಸಭೆ ಪ್ರವೇಶಿಸಿದ್ದ ಕಲಬುರಗಿ ಸಂಸದ ಉಮೇಶ್ ಜಾಧವ್, ತಾವು ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ನಿರೀಕ್ಷಿಸಿದ್ದಾಗಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ನನಗೆ ಸಚಿವ ಸ್ಥಾನ ಸಿಕ್ಕಿಲ್ಲ. ಬಿಜೆಪಿಯವರು ಪ್ಲ್ಯಾನ್ ಮಾಡ್ತಾರೆ. ಮುಂದೆ ಹೈದ್ರಾಬಾದ್ ಕರ್ನಾಟಕಕ್ಕೆ ಮಂತ್ರಿ ಸ್ಥಾನ ಕೊಡಬಹುದು ಅನ್ನೋ ನಿರೀಕ್ಷೆ ಇದೆ. ಸಚಿವ ಸ್ಥಾನ ಕೊಡಲಿ, ಬಿಡಲಿ ನನ್ನ ಕ್ಷೇತ್ರದ ಅಭಿವೃದ್ಧಿ ಕಡೆ ಗಮನ ಕೊಡ್ತೇನೆ ಎಂದರು.
ಮಲ್ಲಿಕಾರ್ಜುನ ಖರ್ಗೆ ಅವರ ಅವಧಿಯಲ್ಲಿ ಅರ್ಧಕ್ಕೆ ನಿಂತ ಯೋಜನೆಗಳನ್ನು ಪೂರ್ಣಗೊಳಿಸುತ್ತೇನೆ. ಹೊಸ ಯೋಜನೆಗಳನ್ನೂ ಕೈಗೆತ್ತಿಕೊಳ್ಳುತ್ತೇನೆ. ಖರ್ಗೆ ಅವರ ಸಲಹೆ ಪಡೆದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ನಿಮ್ಜ್ ಸೇರಿದಂತೆ ಈ ಭಾಗದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಲಿದ್ದೇನೆ ಎಂದರು.