ಕರ್ನಾಟಕ

karnataka

ETV Bharat / state

ಕಲಬುರಗಿ ಜಿಲ್ಲಾಧಿಕಾರಿಯಾಗಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅಧಿಕಾರ ಸ್ವೀಕಾರ - ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ

ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಕಲಬುರಗಿ ಜಿಲ್ಲೆಯ ಮೊದಲ ಮಹಿಳಾ ಜಿಲ್ಲಾಧಿಕಾರಿಗಳಾಗಿದ್ದಾರೆ. 2010ನೇ ಬ್ಯಾಚಿನ ಐಎಎಸ್ ಅಧಿಕಾರಿ ಇವರಾಗಿದ್ದಾರೆ.

Vasireddy Vijaya Jyotsna
ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ

By

Published : Aug 29, 2020, 5:12 PM IST

ಕಲಬುರಗಿ: ಜಿಲ್ಲೆಯ ಮೊದಲ ಮಹಿಳಾ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅಧಿಕಾರ ಸ್ವೀಕರಿಸಿದರು.

ಕಲಬುರಗಿ ಜಿಲ್ಲಾಧಿಕಾರಿಯಾಗಿದ್ದ ಶರತ್ ಬಿ. ಅವರನ್ನು ಶುಕ್ರವಾರ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ವಿ.ವಿ. ಜ್ಯೋತ್ಸ್ನಾ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿತ್ತು.

ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಕಲಬುರಗಿ ಜಿಲ್ಲೆಯ ಮೊದಲ ಮಹಿಳಾ ಜಿಲ್ಲಾಧಿಕಾರಿಗಳಾಗಿದ್ದಾರೆ. 2010ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ಜ್ಯೋತ್ಸ್ನಾ ಅವರು ಪ್ರಸ್ತುತ ಕರ್ನಾಟಕ ಕಟ್ಟಡ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ವಿ.ವಿ. ಜ್ಯೋತ್ಸ್ನಾ ಈ ಮೊದಲು ಕಲಬುರಗಿ ಜಿಲ್ಲೆಯ ಸೇಡಂ ಸಹಾಯಕ ಆಯುಕ್ತರಾಗಿಯೂ ಕಾರ್ಯನಿರ್ವಹಿಸಿದ್ದರು

ABOUT THE AUTHOR

...view details