ಕಲಬುರಗಿ:ಕೋವಿಡ್-19 ತಡೆಗಟ್ಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ಇತರೆ ಇಲಾಖೆಗಳ ಸಿಬ್ಬಂದಿ ಮನೆಗೆ ಬಂದಾಗ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಶರತ್ ಮನವಿ ಮಾಡಿದ್ದಾರೆ.
ಆರೋಗ್ಯ ಇಲಾಖೆ ಅಧಿಕಾರಿಗಳು ಮನೆಗೆ ಬಂದ್ರೆ ಸಹಕರಿಸಿ: ಕಲಬುರಗಿ ಡಿಸಿ - ನಿಜಾಮುದ್ದೀನ್ ತಬ್ಲಿಘಿ ಜಮಾತ್ ಪ್ರಾರ್ಥನೆ
ಕೋವಿಡ್-19 ತಡೆಗಟ್ಟಲು ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ವಿಶೇಷ ತಂಡ ಹಾಗೂ ಆಶಾ ಕಾರ್ಯಕರ್ತೆಯರು ಆರೋಗ್ಯ ತಪಾಸಣೆಗಾಗಿ ಮನೆಗೆ ಬಂದಾಗ ಸಾರ್ವಜನಿಕರು ಸಹಕರಿಸಬೇಕು. ಒಂದು ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಡಿಸಿ ಬಿ. ಶರತ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಬಿ. ಶರತ್
ಇನ್ನು ಕೊರೊನಾ ವೈರಸ್ ಕುರಿತಂತೆ ಜಿಲ್ಲೆಯಲ್ಲಿ ಕೆಲವು ಕಿಡಿಗೇಡಿಗಳು, ಸಮಾಜಘಾತುಕ ಶಕ್ತಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪೋಸ್ಟ್ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇಂತಹ ಕೃತ್ಯ ಎಸಗಿದವರ ಮೇಲೂ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಖಡಕ್ ಸೂಚನೆ ನೀಡಿದ್ದಾರೆ.