ನಗರದ ಡಾ. ಬಿ ಆರ್ ಅಂಬೇಡ್ಕರ್ ವಸತಿಯ ನಿಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ನೂತನ ಅಂಬೇಡ್ಕರ್ ವಸತಿ ನಿಲಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಒಟ್ಟು 113 ಕೋಟಿ ವೆಚ್ಚದ ಕಾಮಗಾರಿಗಳಿಗೆ ಅಡಿಗಲ್ಲು ಹಾಕಿದರು.
ಪ್ರಧಾನಿ ಬಸವಣ್ಣನವರ ವಚನ ಹೇಳುವ ಹಾಗೆ ನಡೆದುಕೊಂಡರೆ ದೇಶ ಉದ್ಧಾರವಾಗಲಿದೆ:ಖರ್ಗೆ - ಜಿಲ್ಲಾಧಿಕಾರಿ
ಕಲಬುರಗಿ: ನಗರದಲ್ಲಿ ನೆಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಶಂಕುಸ್ಥಾಪನೆ ನೆರವೇರಿಸಿದರು.
ಕಾಂಗ್ರೆಸ್ ಸಂಸದೀಯ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಕಾಲ ಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದರು. ಇದೇ ವೇಳೆ ಸದನದಲ್ಲಿ ಬಸವಣ್ಣನವರ ವಚನ ಹೇಳುವ ಪ್ರಧಾನಿ ಮೋದಿ ಅವರು, ವಚನ ಹೇಳಿದ ಹಾಗೆ ನಡೆದುಕೊಂಡರೆ ದೇಶ ಉದ್ಧಾರವಾಗಲಿದೆ ಎಂದು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಕಾರ್ಯಾಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕಿ ಕನೀಸಾ ಫಾತಿಮಾ, ಶಾಸಕ ಎಂ.ವೈ.ಪಾಟೀಲ್, ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ, ಪ್ರಾದೇಶಿಕ ಆಯುಕ್ತ ಸುಬೋದ್ ಯಾದವ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.