ಕಲಬುರಗಿ:ಅಂಗನವಾಡಿ ನೌಕರರ ನೇಮಕಾತಿಯಲ್ಲಿ ಅಕ್ರಮ, ಹಾಗೂ ಕಳಪೆ ಆಹಾರ ಪೂರೈಸಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ಕಲಬುರಗಿಯಲ್ಲಿ ಧರಣಿ ನಡೆಸಲಾಯಿತು.
ಅಂಗನವಾಡಿ ನೌಕರರ ನೇಮಕಾತಿಯಲ್ಲಿ ಅಕ್ರಮ ಆರೋಪ: ಕಲಬುರಗಿಯಲ್ಲಿ ಪ್ರತಿಭಟನೆ - kalburgiprotestnews
ಅಂಗನವಾಡಿ ನೌಕರರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಅಂಗನವಾಡಿ ನೌಕರರ ನೇಮಕಾತಿಯಲ್ಲಿ ಅಕ್ರಮ ಆರೋಪ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಎದುರು ಪ್ರತಿಭಟಿಸಿದ ಕಾರ್ಯಕರ್ತರು, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಅಂಗನವಾಡಿಗಳಿಗೆ ಪೂರೈಸುತ್ತಿರುವ ಪೌಷ್ಠಿಕ ಆಹಾರ ಕಳಪೆ ಗುಣಮಟ್ಟದಿಂದ ಕೂಡಿದೆ. ಇದಕ್ಕೆ ಕಾರಣರಾದ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಂಗನವಾಡಿ ನೌಕರರ ನೇಮಕಾತಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆಗಟ್ಟಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಲ್ಲಿನ ವಸತಿ ನಿಲಯಗಳಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರಿಗೆ ಬಾಕಿ ವೇತನ ಪಾವತಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.