ಕರ್ನಾಟಕ

karnataka

ETV Bharat / state

ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ: ಮಣಿಕಂಠ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಡಿಎಸ್​ಎಸ್​ ಆಗ್ರಹ - ಮಣಿಕಂಠ ರಾಠೋಡ

ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ಆರೋಪ ಎದುರಿಸುತ್ತಿರುವ ಮಣಿಕಂಠ ರಾಠೋಡ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರ ಪ್ರತಿಭಟನೆ
ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರ ಪ್ರತಿಭಟನೆ

By

Published : Aug 24, 2020, 3:46 PM IST

ಕಲಬುರಗಿ:ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ಆರೋಪ ಎದುರಿಸುತ್ತಿರುವ ಮಣಿಕಂಠ ರಾಠೋಡ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿಎಸ್ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು, ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ಮಾಡಿದ ಮಣಿಕಂಠ ರಾಠೋಡ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಕಳೆದ ಹತ್ತು ವರ್ಷಗಳಿಂದಲೂ ಅನ್ನಭಾಗ್ಯ ಯೋಜನೆಯ ಅಕ್ಕಿ ಲೂಟಿ ಮಾಡಲಾಗುತ್ತಿದೆ. ಮಣಿಕಂಠ ರಾಠೋಡ ವಿರುದ್ದ ಕಲ್ಯಾಣ ಕರ್ನಾಟಕ ಭಾಗದಲ್ಲಿ ನೂರಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ. ಆದರೂ ಸಹ ಮಣಿಕಂಠ ರಾಠೋಡ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಆರೋಪಿ ಮಣಿಕಂಠ ರಾಠೋಡ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ, ರಾಜ್ಯದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿದರು.

ABOUT THE AUTHOR

...view details