ಕಲಬುರಗಿ: ಪರವಾನಿಗೆ ಇಲ್ಲದೇ, ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಮರಳು ತುಂಬಿ ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ಗಳನ್ನು ಕಮಲಾಪುರ ತಹಶೀಲ್ದಾರ್ರು ದಾಳಿ ನಡೆಸಿ ವಶಕ್ಕೆ ಪಡೆಸಿಕೊಂಡಿದ್ದಾರೆ.
ಅಕ್ರಮ ಮರಳು ಸಾಗಾಟ: ಎರಡು ಟಿಪ್ಪರ್ ವಶ - kalburgi latest news
ಕಲಬುರಗಿ ಜಿಲ್ಲೆ ಕಮಲಾಪುರ ತಹಶೀಲ್ದಾರ್ ನೇತೃತ್ವದಲ್ಲಿ ಅಕ್ರಮ ಎರಡು ಟಿಪ್ಪರ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಲಬುರಗಿಯಲ್ಲಿ ಅಕ್ರಮ ಮರಳು ಸಾಗಾಟ
ಅಕ್ರಮ ಮರಳು ಸಾಗಾಟದ ಆರೋಪದ ಹಿನ್ನಲೆ ಕಮಲಾಪುರ ತಾಲೂಕಿನ ಮಹಾಗಾಂವ ಕ್ರಾಸ್ನಲ್ಲಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾಳಿ ನಡೆಸಲಾಯಿತು. ದಾಖಲೆ ಪರಿಶೀಲನೆ ಮಾಡಿದಾಗ ಮರಳು ಸಾಗಾಟ ಮಾಡುವ ಪರವಾನಿಗೆ ಮುಗಿದು, ಎರಡು ತಿಂಗಳಾದರೂ ಅಕ್ರಮವಾಗಿ ಮರಳು ಸಾಗಾಟ ಮಾಡುವುದು ಪತ್ತೆಯಾಗಿದೆ.
ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.