ಕಲಬುರಗಿ:ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಎರಡು ದಿನಗಳ ಕಾಲ ಕುಡಿಯುವ ನೀರು, ನೈರ್ಮಲ್ಯ ಮತ್ತು ಆರೋಗ್ಯ ಕುರಿತು ಜನಜಾಗೃತಿ ವಸ್ತು ಪ್ರದರ್ಶನ ಆಯೋಜಿಸಿದ್ದು, ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸಿಇಒ ಡಾ. ಪಿ.ರಾಜಾ ಉದ್ಘಾಟಿಸಿದರು.
ಕಲಬುರಗಿಯಲ್ಲಿ ಜನಜಾಗೃತಿ ವಸ್ತು ಪ್ರದರ್ಶನ - Kalaburagi
ಸರ್ಕಾರದಿಂದ ಸಿಗುವ ಹಲವಾರು ಯೋಜನೆಗಳ ಲಾಭ ಪಡೆದುಕೊಳ್ಳಲು ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಎರಡು ದಿನಗಳ ಕಾಲ ಕುಡಿಯುವ ನೀರು, ನೈರ್ಮಲ್ಯ ಮತ್ತು ಆರೋಗ್ಯ ಕುರಿತು ಜನಜಾಗೃತಿ ವಸ್ತು ಪ್ರದರ್ಶನ ಆಯೋಜಿಸಲಾಗಿದೆ.
ಜನಜಾಗೃತಿವಸ್ತು ಪ್ರದರ್ಶನ
ಬಳಿಕ ಮಾತನಾಡಿದ ರಾಜಾ, ಸರ್ಕಾರದಿಂದ ಸಿಗುವ ಹಲವಾರು ಯೋಜನೆಗಳ ಲಾಭ ಪಡೆದುಕೊಳ್ಳಲು ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಈ ವಸ್ತು ಪ್ರದರ್ಶನ ಆಯೋಜಿಸಲಾಗಿದೆ. ವಿಶೇಷವಾಗಿ ಗ್ರಾಮೀಣ ನೈರ್ಮಲ್ಯ, ಕುಡಿಯುವ ನೀರು ಮತ್ತು ಆರೋಗ್ಯ ಇಲಾಖೆಗೆ ಸಂಬಂಧಿಸಿದ ಹೆಚ್ಚಿನ ಯೋಜನೆಗಳ ಮಾಹಿತಿ ಇಲ್ಲಿ ಲಭ್ಯವಿದೆ ಎಂದು ತಿಳಿಸಿದರು.
ಜೊತೆಗೆ, ಶನಿವಾರ ಮತ್ತು ಭಾನುವಾರ ವಸ್ತು ಪ್ರದರ್ಶನ ಉಚಿತ ವೀಕ್ಷಣೆಗೆ ಅವಕಾಶವಿದ್ದು, ನಿಲ್ದಾಣಕ್ಕೆ ಬರುವ ಎಲ್ಲಾ ಸಾರ್ವಜನಿಕರು ವೀಕ್ಷಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.