ಕಲಬುರಗಿ : ಜಿಲ್ಲೆಯ ಚಿಂಚೋಳಿ ತಾಲೂಕಿನ ಗಂಡೋರಿ ನಾಲಾ ಅಣೆಕಟ್ಟು ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ, ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ನೀರು ನದಿಗೆ ಬಿಡುವುದಾಗಿ ಕರ್ನಾಟಕ ನೀರಾವರಿ ನಿಗಮದ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಗಂಡೋರಿ ನಾಲಾ ಜಲಾನಯನ 1.887 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಈಗಾಗಲೇ 1.419 ನೀರು ಸಂಗ್ರಹವಾಗಿದೆ. ಅಲ್ಲದೇ 631 ಕ್ಯೂಸೇಕ್ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಒಳಹರಿವು ಅನುಗುಣವಾಗಿ ನದಿಗೆ ನೀರು ಬೀಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.