ಕಲಬುರಗಿ: ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದೆ ಎಂದು ಕೆಲ ಉದ್ರಿಕ್ತರು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಪ್ರತಿಭಟನೆ ನಡೆಸಿರುವ ಘಟನೆ ಕಮಲಾಪುರ ತಾಲೂಕಿನ ದಸ್ತಾಪುರ ಗ್ರಾಮದಲ್ಲಿ ನಡೆದಿದೆ.
ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ... ಉದ್ರಿಕ್ತರಿಂದ ಕಲ್ಲು ತೂರಾಟ - undefined
ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಸೆಗಣಿ ಎರಚಿ ಅಪಮಾನ ಮಾಡಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ
ಗ್ರಾಮದಲ್ಲಿರುವ ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಸೆಗಣಿ ಎರಚಿ ಅಪಮಾನ ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ದ್ವಿಚಕ್ರ ವಾಹನಗಳು ಮತ್ತು ಟಂಟಂ ವಾಹನಕ್ಕೆ ಕಲ್ಲು ಎಸೆದು ಜಖಂಗೊಳಿಸಿದ್ದಾರೆ. ಪ್ರತಿಭಟನೆ ನಡೆಸುವ ಮೂಲಕ ತಕ್ಷಣ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಮಹಾಗಾಂವ ಪೊಲೀಸರು ಪರಿಶೀಲನೆ ನಡೆಸಿ, ಮಹಾಗಾಂವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಿಡಿಗೇಡಿಗಳ ಬಂಧನಕ್ಕೆ ಜಾಲ ಬೀಸಿದ್ದಾರೆ.