ಕಲಬುರಗಿ:ಬೈಕ್ ಕದ್ದು,ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಅಂತರರಾಜ್ಯ ಬೈಕ್ ಕಳ್ಳನನ್ನು ಬಂಧಿಸುವಲ್ಲಿ ಜಿಲ್ಲೆಯ ಸೇಡಂ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೈಕ್ ಕದ್ದು ಹೊರ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದ ಖದೀಮನ ಬಂಧನ - kalburgi latest news
ಬೈಕ್ ಕದ್ದು, ರಾಜ್ಯ ಸೇರಿದಂತೆ ಹೊರ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಅಂತರರಾಜ್ಯ ಬೈಕ್ ಕಳ್ಳನನ್ನು ಬಂಧಿಸುವಲ್ಲಿ ಜಿಲ್ಲೆಯ ಸೇಡಂ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೈಕ್ ಕದ್ದು ಹೊರ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದ ಖದೀಮನ ಬಂಧನ
ಬಂಧಿತ ಆರೋಪಿಯನ್ನು ತೆಲಂಗಾಣ ರಾಜ್ಯದ ತಾಂಡೂರಿನ ಸಾಹೇಬ್ ಪಟೇಲ್ ಬಾರಾಮನಿ ಎಂದು ಗುರುತಿಸಲಾಗಿದೆ. ಬಂಧಿತನಿಂದ 5.50 ಲಕ್ಷ ರೂಪಾಯಿ ಮೌಲ್ಯದ 11 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಹೇಬ್ ಪಟೇಲ್ ಸಹಚರ ಮಲ್ಲು ಅಲಿಯಾಸ್ ಮಲ್ಲಿಕಾರ್ಜುನ ಎಂಬಾತ ತಲೆಮರೆಸಿಕೊಂಡಿದ್ದು,ಆತನ ಬಂಧನಕ್ಕೆ ಪೋಲಿಸರು ಬಲೆ ಬೀಸಿದ್ದಾರೆ.
ಈ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.