ಕಲಬುರಗಿ: ಕಲಬುರಗಿ ನಗರ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎನ್. ಸತೀಶ ಕುಮಾರ ಅವರನ್ನು ನೇಮಕ ಮಾಡಿ ಕೆಎಸ್ಆರ್ಪಿ ಎಡಿಜಿಪಿ ಆದೇಶ ಹೊರಡಿಸಿದ್ದಾರೆ. ಕಲಬುರಗಿಯ ಮೊದಲ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ಎಂ.ಎನ್. ನಾಗರಾಜ್ ಅವರು ನಿವೃತ್ತಿಯಾದ ಹಿನ್ನೆಲೆಯಲ್ಲಿ ನೂತನ ಕಮಿಷನರ್ ಆಗಿ ಐಪಿಎಸ್ ಅಧಿಕಾರಿ ಎನ್. ಸತೀಶ ಕುಮಾರ ಅವರನ್ನು ಸರ್ಕಾರ ನಿಯೋಜಿಸಿದೆ.
ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ಎನ್. ಸತೀಶ ಕುಮಾರ ನೇಮಕ - ಎನ್. ಸತೀಶ ಕುಮಾರ ನೇಮಕ
ಕಲಬುರಗಿ ನಗರಕ್ಕೆ ನೂತನ ಪೊಲೀಸ್ ಆಯುಕ್ತರನ್ನು ನೇಮಿಸಲಾಗಿದೆ. ಐಪಿಎಸ್ ಅಧಿಕಾರಿ ಎನ್. ಸತೀಶ ಕುಮಾರ ಅವರನ್ನು ಕಲಬುರಗಿ ನಗರದ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

IPS N. Satish Kumar
ಸತೀಶ್ ಕುಮಾರ ಅವರು ಈ ಮುನ್ನ ಬೆಂಗಳೂರು ನಗರ ಕೆಎಸ್ಆರ್ಪಿ ಡೆಪ್ಯೂಟಿ ಇನ್ಸಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಕಲಬುರಗಿ ಡಿಐಜಿಪಿ ಹಾಗೂ ಪೊಲೀಸ್ ಆಯುಕ್ತರಾಗಿ ತಕ್ಷಣದಿಂದ ಕಾರ್ಯ ಪ್ರವೃತ್ತರಾಗುವಂತೆ ಅವರಿಗೆ ಸೂಚಿಸಲಾಗಿದೆ.