ಕರ್ನಾಟಕ

karnataka

ETV Bharat / state

ಗವಿಮಠದ ಜಾತ್ರೆಯನ್ನು ಸಾಂಕೇತಿಕವಾಗಿ ಆಚರಿಸುವುದು ಸೂಕ್ತ: ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ - ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ

ಕೊರೊನಾ ಭೀತಿ ಇರುವ ಹಿನ್ನೆಲೆ, ಈ ಬಾರಿ ಗವಿಮಠದ ಜಾತ್ರೆಯನ್ನು ಸಾಂಕೇತಿಕವಾಗಿ ಆಚರಿಸಿದರೆ ಸೂಕ್ತ. ಈ ದಿಸೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ಧಾರವನ್ನು ನಾನು ಬೆಂಬಲಿಸುತ್ತೇನೆ ಅಂತಾ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ತಿಳಿಸಿದ್ದಾರೆ

ಅಮರೇಗೌಡ ಪಾಟೀಲ್ ಬಯ್ಯಾಪುರ
ಅಮರೇಗೌಡ ಪಾಟೀಲ್ ಬಯ್ಯಾಪುರ

By

Published : Jan 5, 2021, 1:26 PM IST

ಕೊಪ್ಪಳ:ಜನರ ಆರೋಗ್ಯದ ಹಿತದೃಷ್ಠಿಯಿಂದ ಈ ಬಾರಿ ಕೊಪ್ಪಳ ಗವಿಮಠದ ಜಾತ್ರೆಯನ್ನು ಸಾಂಕೇತಿಕ ಆಚರಣೆ ಮಾಡುವುದು ಸೂಕ್ತ ಎಂದು ಜಿಲ್ಲೆಯ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಅವರು, ಗವಿಮಠ ಜಾತ್ರೆ ಅತಿ ದೊಡ್ಡ ಜಾತ್ರೆ. ಲಕ್ಷಾಂತರ ಜನರು ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಕೊರೊನಾ ಭೀತಿ ಇರುವ ಹಿನ್ನೆಲೆ, ಈ ಬಾರಿ ಜಾತ್ರೆಯನ್ನು ಸಾಂಕೇತಿಕವಾಗಿ ಆಚರಿಸಿದರೆ ಸೂಕ್ತ. ಈ ದಿಸೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ಧಾರವನ್ನು ನಾನು ಬೆಂಬಲಿಸುತ್ತೇನೆ. ಲಕ್ಷಾಂತರ ಜನರು ಜಾತ್ರೆಗೆ ಸೇರುವುದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಜಾತ್ರೆಯನ್ನು ಸರಳವಾಗಿ ಆಚರಿಸುವಂತೆ ನಾನು ಶ್ರೀಗಳಲ್ಲಿಯೂ ಸಹ ಮನವಿ ಮಾಡುತ್ತೇನೆ ಎಂದರು.

ಗವಿಮಠದ ಜಾತ್ರೆಯನ್ನು ಸಾಂಕೇತಿಕವಾಗಿ ಆಚರಿಸುವುದು ಸೂಕ್ತ..ಅಮರೇಗೌಡ ಪಾಟೀಲ್ ಬಯ್ಯಾಪುರ

ಸರ್ಕಾರ ಶಾಲೆಗಳನ್ನು ಆರಂಭ ಮಾಡಿರುವ ಕ್ರಮ ಸರಿಯಾಗಿದೆ. ಆದರೆ ಕೋವಿಡ್ ನಿಯಮಗಳನ್ನು ಪಾಲನೆ ಮಾಡುವುದರ ಜೊತೆಗೆ ಶಾಲೆಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಶಾಲೆಯ ಆರಂಭದ ದಿನ ಶಾಲೆಗಳಿಗೆ ಭೇಟಿ ನೀಡುವಂತೆ ಸ್ವತಃ ಸಚಿವ ಸುರೇಶ್ ಕುಮಾರ್ ಅವರು ಕರೆ ಮಾಡಿ ಮನವಿ ಮಾಡಿದ್ದರು. ಅದರಂತೆ ನಾನು ಸಹ ಶಾಲೆಯ ಆರಂಭದ ದಿನದಂದು ನನ್ನ ಕ್ಷೇತ್ರದ ಸುಮಾರು 20 ಕ್ಕೂ ಹೆಚ್ಚು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ ಎಂದು ಹೇಳಿದರು.

ABOUT THE AUTHOR

...view details