ಕರ್ನಾಟಕ

karnataka

ETV Bharat / state

ಕಲಬುರಗಿ : ಕನ್ನಡ ನಾಮಫಲಕ ಅಳವಡಿಕೆಗೆ ಜೈ ಕನ್ನಡಿಗರ ಸೇನೆ ಆಗ್ರಹ - Kalburgi latest news

ನಗರದಲ್ಲಿ ಅನ್ಯ ಭಾಷೆಯ ನಾಮಫಲಕಗಳು ಎಲ್ಲೆಡೆ ರಾರಾಜಿಸುತ್ತಿವೆ. ಅವುಗಳನ್ನು ತೆರವುಗೊಳಿಸಿ ಕನ್ನಡ ನಾಮಫಲಕ ಅಳವಡಿಕೆಗೆ ಕೈ ಕನ್ನಡಿಗರ ಸೇನೆ ಸಂಘಟನೆ ಒತ್ತಾಹಿಸಿದೆ.

Kalburgi
Kalburgi

By

Published : Oct 3, 2020, 3:28 PM IST

ಕಲಬುರಗಿ:ನಗರದ ಹಲವೆಡೆ ಅನ್ಯ ಭಾಷೆಗಳ ನಾಮಫಲಕಗಳು ರಾರಾಜಿಸುತ್ತಿದ್ದು, ಅಂತಹ ನಾಮಫಲಕಗಳನ್ನು ತೆರವುಗೊಳಿಸಿ ಕಡ್ಡಾಯವಾಗಿ ಕನ್ನಡ ಭಾಷೆ ನಾಮಫಲಕ ಅಳವಡಿಸುವಂತೆ ಆದೇಶಿಸುವಂತೆ ಜೈ ಕನ್ನಡಿಗರ ಸೇನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಜೈ ಕನ್ನಡಿಗರ ಸೇನೆ ಸಂಘಟನೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ಕನ್ನಡ ನಾಮಫಲಕವನ್ನು ಕಡ್ಡಾಯಗೊಳಿಸುವಂತೆ ಒತ್ತಾಯಿಸಿದರು.

ನಗರದ ಪ್ರಮುಖ ವೃತ್ತಗಳಾದ ಸರ್ದಾರ ವಲ್ಲಭಬಾಯಿ ಪಟೇಲ್ ವೃತ್ತ, ಜಗತ್ ಸರ್ಕಲ್, ಸೂಪರ್ ಮಾರ್ಕೆಟ್ ಸೇರಿದಂತೆ ಹಲವೆಡೆ ಅಂಗಡಿಗಳ ಮೇಲೆ ಕನ್ನಡ ಭಾಷೆ ಹೊರತುಪಡಿಸಿ, ಹಿಂದಿ, ಇಂಗ್ಲಿಷ್ ಉರ್ದು, ಮರಾಠಿ ಭಾಷೆಗಳ ನಾಮಪತ್ರವನ್ನು ಅಳವಡಿಸಲಾಗಿದೆ. ಕೂಡಲೇ ಅನ್ಯಭಾಷೆಯ ನಾಮಫಲಕಗಳು ತೆರವುಗೊಳಿಸಿ ಕನ್ನಡ ಭಾಷೆಯ ನಾಮಪತ್ರವನ್ನು ಅಳವಡಿಸುವಂತೆ ಆಗ್ರಹಿಸಿದರು.

ABOUT THE AUTHOR

...view details