ಕರ್ನಾಟಕ

karnataka

ETV Bharat / state

'ಆಟೋ, ಕ್ಯಾಬ್‌ ಚಾಲಕರಿಗೆ 5 ಸಾವಿರ ರೂ ಪ್ರೋತ್ಸಾಹ ಧನ ಇನ್ನೂ ಸಿಕ್ಕಿಲ್ಲ': ಕಲಬುರಗಿಯಲ್ಲಿ ಪ್ರತಿಭಟನೆ - ಜೈ ಕನ್ನಡಿಗರ ಸೇನೆ ನೇತೃತ್ವದಲ್ಲಿ ಪ್ರತಿಭಟನೆ

ಸರ್ಕಾರ ವಾಹನ ಚಾಲಕರಿಗೆ ಪ್ರೋತ್ಸಾಹ ಧನ ನೀಡುತ್ತಿಲ್ಲ ಎಂದು ಆರೋಪಿಸಿ ಜೈ ಕನ್ನಡಿಗರ ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

protest in kalburgi
ಜೈ ಕನ್ನಡಿಗರ ಸೇನೆ ನೇತೃತ್ವದಲ್ಲಿ ಪ್ರತಿಭಟನೆ

By

Published : Jul 1, 2020, 1:33 PM IST

ಕಲಬುರಗಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ವಾಹನ ಚಾಲಕರಿಗೆ ಘೋಷಿಸಲಾದ 5 ಸಾವಿರ ರೂ ಪ್ರೋತ್ಸಾಹ ಧನ ಇನ್ನೂ ದೊರೆತಿಲ್ಲ ಎಂದು ಆರೋಪಿಸಿ ಜೈ ಕನ್ನಡಿಗರ ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಜೈ ಕನ್ನಡಿಗರ ಸೇನೆ ನೇತೃತ್ವದಲ್ಲಿ ಪ್ರತಿಭಟನೆ
ಕಲಬುರಗಿ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿದ ಕ್ಯಾಬ್ ಚಾಲಕರು, ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಆಶ್ವಾಸನೆ ನೀಡಿದಂತೆ ನಡೆದುಕೊಂಡಿಲ್ಲ, ಆಟೋ ಹಾಗೂ ಕ್ಯಾಬ್ ಚಾಲಕರಿಗೆ 5 ಸಾವಿರ ರೂಪಾಯಿ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಯಾರ ಖಾತೆಗೂ ಪ್ರೋತ್ಸಾಹ ಧನ ಜಮೆ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಾಗಾಗಿ, ಕೂಡಲೇ ಪ್ರೋತ್ಸಾಹ ಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ABOUT THE AUTHOR

...view details