ಕಲಬುರಗಿ :ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ ಸೆ.25 ಸೋಮವಾರ ದಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 5.30 ಗಂಟೆ ವರೆಗೆ ಚಿಂಚೋಳಿ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ "ಜನತಾ ದರ್ಶನ" ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ.
ಈ ಕುರಿತು ಮಾಧ್ಯಮಗೋಷ್ಟಿಯಲ್ಲಿ ಮಾಹಿತಿ ತಿಳಿಸಿದ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರುನ್ನುಮ್, ಸುಮಾರು 4 ಸಾವಿರ ಜನ ಸೇರುವ ನಿರೀಕ್ಷೆ ಇರುವುದರಿಂದ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಊಟದ ವ್ಯವಸ್ಥೆ ಮಾಡಲಾಗಿದೆ. ಶಾಮಿಯಾನ್ ಟೆಂಟ್ ಹಾಕಲಾಗಿದ್ದು, ಪಾರ್ಕಿಂಗ್ ವ್ಯವಸ್ಥೆ ಕೂಡಾ ಸುಗಮಗೊಳಿಸಲಾಗಿದೆ. ಇಲಾಖಾವಾರು ಪ್ರತ್ಯೇಕ ಮಳಿಗೆ ತೆರೆದು ಸಾರ್ವಜನಿಕರಿಗೆ ಇಲಾಖೆಯ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಆಹಾರ, ಕೃಷಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ರೇಷ್ಮೆ, ತೋಟಗಾರಿಕೆ, ಕಾರ್ಮಿಕ, ಸಂಚಾರಿ ಪೊಲೀಸ್, ಕಂದಾಯ ಹೀಗೆ ಪ್ರಮುಖ 20 ಇಲಾಖೆಯ ಮಳಿಗೆ ಹಾಕಲಾಗುತ್ತಿದೆ. ಪಡಿತರ ಚೀಟಿ ತಿದ್ದುಪಡಿ, ಆಧಾರ್, ಕೆವೈಸಿ, ವೋಟರ್ ಐಡಿ, ಗೃಹ ಲಕ್ಷ್ಮೀ, ಗೃಹ ಜ್ಯೋತಿ ಸೇರಿದಂತೆ ಇನ್ನಿತರ ಯೋಜನೆಗಳ ತಾಂತ್ರಿಕ ಸಮಸ್ಯೆ ಬಗೆಹರಿಸಲು ಸಿಬ್ಬಂದಿಗಳು ಸ್ಥಳದಲ್ಲಿ ಇರಲಿದ್ದಾರೆ. ಕುಂದುಕೊರತೆ ಅರ್ಜಿ ಸ್ವೀಕಾರಕ್ಕೆ 15 ಕೌಂಟರ್ ತೆರೆಯಲಾಗುತ್ತಿದೆ.
ಇದನ್ನೂ ಓದಿ :ಶಿಕ್ಷಣ ವ್ಯವಸ್ಥೆಯನ್ನು ಸಂವಿಧಾನದ ಆಶಯದಂತೆ ಕಟ್ಟಬೇಕಿದೆ: ಶಿಕ್ಷಣ ತಜ್ಞ ನಿರಂಜನ್ ಆರಾಧ್ಯ