ಕಲಬುರಗಿ :ಎಂಇಎಸ್ ಕಿಡಿಗೇಡಿಗಳ ಪುಂಡಾಟಿಕೆಗೆ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ತಿರುಗೇಟು ನೀಡಿದ್ದಾರೆ. ಮಹಾರಾಷ್ಟ್ರಕ್ಕೆ ತೆರಳುವ ವಾಹನಕ್ಕೆ ಮಸಿ ಬಳಿದು ಖಂಡಿಸಿದ್ದಾರೆ.
ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು.. ನಗರದ ಆಳಂದ ಚೆಕ್ ಪೋಸ್ಟ್ ಬಳಿ ಮಹಾರಾಷ್ಟ್ರದ ವಾಹನ ತಡೆದು ಮಿಂಚಿನ ಪ್ರತಿಭಟನೆ ನಡೆಸಿದ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು, ಮಹಾರಾಷ್ಟ್ರದ ವಾಹನಗಳ ಮೇಲೆ ಕನ್ನಡಪರ ಘೋಷಣೆ ಬರೆದು ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ ನಮ್ಮದು ಎನ್ನುವ ಘೋಷಣೆಗಳೊಂದಿಗೆ ಪ್ರತಿಭಟಿಸಿದ ಕಾರ್ಯಕರ್ತರು ಎಂಇಎಸ್ ಪುಂಡಾಟಿಕೆ ನಿಲ್ಲಿಸಬೇಕು. ಇಲ್ಲದಿದ್ರೆ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಒಂದು ವಾಹನ ಬರದಂತೆ ತಡೆಯುವದಾಗಿ ಎಚ್ಚರಿಕೆ ನೀಡಿದರು.
ಮಹಾರಾಷ್ಟ್ರದಲ್ಲಿ ಕರ್ನಾಟಕ ಪಾಸಿಂಗ್ ವಾಹನಗಳನ್ನು ಜಖಂ ಮಾಡಿದ ಕಿಡಿಗೇಡಿಗಳ ವಿರುದ್ಧ ಮಹಾರಾಷ್ಟ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ರಾಯಣ್ಣನ ಮೂರ್ತಿ ಹಾನಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಇದನ್ನೂ ಓದಿ: ಯುವ ಕುಸ್ತಿಪಟುವಿಗೆ ವೇದಿಕೆ ಮೇಲೆಯೇ ಕಪಾಳ ಮೋಕ್ಷ ಮಾಡಿದ ಬ್ರಿಜ್ ಭೂಷಣ್ ಶರಣ್